Friday, March 13, 2026
Flats for sale
Homeರಾಜ್ಯತುಮಕೂರು :  ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ,ಐವರು ಸಾವು.

ತುಮಕೂರು :  ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ,ಐವರು ಸಾವು.

ತುಮಕೂರು : ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕಿ ಸೇರಿ ಐವರು ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ.

ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಕೆಎ-03 NB 2646 ಸಂಖ್ಯೆಯ ನೆಕ್ಸಾ ಮಾರುತಿ ಕಾರು ಹಾಗೂ ಕೆಎ-64 M 2627 ಸಂಖ್ಯೆಯ ಟಿಯಾಗೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಧುಗಿರಿ ಕಡೆಯಿಂದ ತುಮಕೂರು ಕಡೆಗೆ ಟಿಯಾಗೋ ಕಾರು ಹೊರಟಿತ್ತು.ಐವರು ಮೃತಪಟ್ಟಿದ್ದು ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಧುಗಿರಿ ಠಾಣೆಯ ಪೊಲೀಸರು ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ.ಅಪಘಾತ ಕಾರುಗಳ ತೆರವು ಕಾರ್ಯಾಚರಣೆ ಮಾಡಲಾಗಿದ್ದು ಸ್ಥಳಕ್ಕೆ ಮಧುಗಿರಿ ಪಿಎಸ್​ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular