Wednesday, July 8, 2026
Homeರಾಜ್ಯತುಮಕೂರು : ಕಾಲೇಜು ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ; ಸಿಸಿಟಿವಿಯಲ್ಲಿ ಭೀಕರ ಅಪಘಾತ ದೃಶ್ಯ ಸೆರೆ.

ತುಮಕೂರು : ಕಾಲೇಜು ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ; ಸಿಸಿಟಿವಿಯಲ್ಲಿ ಭೀಕರ ಅಪಘಾತ ದೃಶ್ಯ ಸೆರೆ.

ತುಮಕೂರು : ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಾಯಾಳುವನ್ನು ಹರಿಪ್ರಿಯಾ ಎಂದು ಗುರುತಿಸಲಾಗಿದ್ದು, ಅವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾರೆ. ತಿಪಟೂರು ನಗರದ ಖಾಸಗಿ ಪಿಜಿಯಲ್ಲಿ ವಾಸವಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದರು.

ತಿಪಟೂರು ನಗರದ ಪ್ರವಾಸಿ ಮಂದಿರದ ಸಮೀಪ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿಯೊಂದು ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ.

ಗಂಭೀರವಾಗಿ ಗಾಯಗೊಂಡ ಹರಿಪ್ರಿಯಾಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ರವಾನಿಸಲಾಗಿದೆ. ಲಾರಿ ಡಿಕ್ಕಿ ಹೊಡೆದರೂ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿರುವುದು ಆಶ್ಚರ್ಯಕರವಾಗಿದೆ.

ಘಟನೆ ಸಂಬಂಧ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular