ತುಮಕೂರು : ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಯ ಗಡಿಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ಕಾರಿಗೆ ಓಮಿನಿ ವಾಹನ ಡಿಕ್ಕಿ ಹೊಡೆದ ಪರಿಣಾಮ, ಮತ್ತೊಂದು ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಆಂಧ್ರಪ್ರದೇಶ ಮೂಲದವರಾಗಿದ್ದು, ಅವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.


