Friday, March 13, 2026
Flats for sale
Homeಕ್ರೈಂತುಮಕೂರು : ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಬೆಳ್ತಂಗಡಿ ಮೂಲದವರು,50 ಲಕ್ಷ ದೋಚಿ ಮೂವರನ್ನು...

ತುಮಕೂರು : ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಬೆಳ್ತಂಗಡಿ ಮೂಲದವರು,50 ಲಕ್ಷ ದೋಚಿ ಮೂವರನ್ನು ಸುಟ್ಟುಹಾಕಿದ 6 ಮಂದಿ ದರೋಡೆಕೋರರ ಬಂಧನ.

ತುಮಕೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಮೂವರು ಚಿನ್ನದ ಆಸೆಗೆ ಬಿದ್ದು ತುಮಕೂರಿಗೆ ಹೋಗಿ ದರೋಡೆಕೋರರಿಂದ ಕೊಲೆಯಾದರು ಎನ್ನುವ ವಿಚಾರ ಪೋಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಹತ್ಯೆಯಾದವರನ್ನು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮೂಲದ ಇಸಾಕ್ (56), ಸಾಹುಲ್ (45) ಮತ್ತು ಇಮ್ತಿಯಾಜ್ (34) ತಿಳಿದುಬಂದಿದೆ.

ರಿಯಲ್ ಎಸ್ಟೇಟ್ ಡೀಲರ್ ಗಳಿಗೆ ಬೇರೆ ಬೇರೆ ಪ್ರದೇಶದ ರಿಯಲ್ ಎಸ್ಟೇಟ್ ಡೀಲ್ ಮಾಡುವವರ ಪರಿಚಯವಾಗುವುದು ಸಹಜ ಆದರೆ ತಮ್ಮ ಜಮೀನಿನಲ್ಲಿ ಕೃಷಿ ಮಾಡುವಾಗ ಚಿನ್ನದಹಂಡೆ ಸಿಕ್ಕಿದೆ ಅಂತ ನಕಲಿ ಚಿನ್ನವನ್ನು ತೋರಿಸಿ ಅದನ್ನು ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ನಂಬಿಸಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮೂಲದ ಮೂವರನ್ನು ತುಮಕೂರಿಗೆ ಕರೆಸಿಕೊಂಡಿದ್ದರು. ಇದೀಗ ಚಿಕ್ಕಮಗಳೂರು ಜಿಲ್ಲೆಯ ಕುಚ್ಚಂಗಿ ತಾಲೂಕಿನ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣವು ಇದೀಗ ತಿರುವು ಪಡೆದುಕೊಂಡಿದೆ.

ದರೋಡೆ ಕೋರರು ಸಾಕ್ಷಿ ನಾಶಮಾಡಲು ಮೂವರ ಮೇಲೆ ಹಲ್ಲೆಗೈದು ಕೈ, ಕಾಲು, ಕಟ್ಟಿಹಾಕಿ ಬೆಂಕಿ ಹಚ್ಚಿದ್ದಾರೆ . ಮೂವರ ಪೈಕಿ ಇಬ್ಬರ ಶವವನ್ನು ಕಾರಿನ ಡಿಕ್ಕಿಗೆ ಹಾಕಿದ್ದು, ಮತ್ತೊಬ್ಬನ ಶವವನ್ನು ಕಾರಿನ ಮಧ್ಯಭಾಗದಲ್ಲಿ ಇರಿಸಲಾಗಿತ್ತು. ಕೊಲೆ ವಿಚಾರ ತಿಳಿಯಬಾರದೆಂದು ಆರೋಪಿಗಳು ಕಾರಿಗೆ ಬೆಂಕಿ ಹಚ್ಚಿದ್ದಾರೆ .ದರೋಡೆಕೋರರು ಗುರುತು ಪತ್ತೆ ಹಚ್ಚಲು ಆಗದ ಸ್ಥಿತಿಯಲ್ಲಿ ಮೂವರ ದೇಹಗಳು ಸುಟ್ಟು ಹೋಗಿದ್ದವು ಜೊತೆಗೆ ಕೈಯಲ್ಲಿ ತೆಗೆದುಕೊಂಡು 50 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದರೆಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಿಧಿ ಸಿಕ್ಕಿದೆ ಎಂದು ದರೋಡೆಕೋರರ ಮಾತನ್ನು ನಂಬಿದ ಇಸಾಕ್, ಡೀಲ್ ಇದೆ ಬಾ ಅಂತಾ ತನ್ನ ಇಬ್ಬರು ಸ್ನೇಹಿತರಾದ ಸಾಹುಲ್ ಮತ್ತು ಇಮ್ತಿಯಾಜ್ ಅವರನ್ನು ಕರೆದಿದ್ದಾನೆ. ಚಿನ್ನ ಇದೆ ಇಷ್ಟು ಹಣ ತೆಗೆದುಕೊಂಡು ಬನ್ನಿ ಎಂದು ಫೋನಿನ ಮೂಲಕ ಮೊದಲೇ ಮಾತುಕತೆ ನಡೆಸಿದ್ದರು ಎಂದು ತಿಳಿದುಬಂದಿದೆ.ತುಮಕೂರು ಮೂಲದ ಸ್ವಾಮಿ ಎಂಬಾತನ ಪರಿಚಯದ ಮೂಲಕ ತುಮಕೂರಿಗೆ ಕಾರು ಮೂಲಕ ಹೋಗಿದ್ದರು.ಗುರುವಾರ ಸಂಜೆವರೆಗೂ ಕುಟುಂಬಸ್ಥರ ಜೊತೆ ಸಂಪರ್ಕದಲ್ಲಿದ್ದ ಇಸಾಕ್​ನ ಮೊಬೈಲ್ ಗುರುವಾರ ರಾತ್ರಿ ಸ್ವಿಚ್‌ ಆಫ್ ಆಗಿತ್ತು. ಈ ಬಗ್ಗೆ ಹೆಚ್ಚೆತ್ತು ಮೂವರ ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು .

ಈ ಬಗ್ಗೆ ಮೂವರ ಶವ ಕಾರಿನಲ್ಲಿ ಪತ್ತೆಯಾಗಿರುವ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .ಮಾಹಿತಿ ಕಲೆಹಾಕಿದ ಪೊಲೀಸರು ಕಾರಿನ ನಂಬರ್ ಆಧರಿಸಿ ಕಾರು ಮಾಲೀಕ ರಫೀಕ್ ಸಂಪರ್ಕ ಮಾಡಿದಾಗ ಇಸಾಕ್​ ಎಂಬಾತನಿಗೆ 15 ದಿನಗಳ ಹಿಂದೆ ಕಾರು ಕೊಟ್ಟಿದ್ದಾಗಿ ಹೇಳಿಕೊಂಡಿದ್ದಾರೆ. ಇದರಿಂದಾಗಿ ಮೃತರ ಗುರುತು ಪತ್ತೆಕಾರ್ಯ ಪೊಲೀಸರಿಗೆ ಸುಲಭವಾಯಿತು.ನಕಲಿ ಚಿನ್ನದ ಆಶೆಗೆ ಹೋಗಿ ದರೋಡೆಕೋರರ ಕೈಗೆ ಸಿಕ್ಕಿ ಹಣ ಹಾಗೂ ಜೀವವನ್ನು ಕಳೆದುಕೊಂಡ ಕುಟುಂಬಗಳಿಗೆ ಆಸರೆಯಿಲ್ಲದಂತಾಗಿದೆ .ಸದ್ಯ ಈ ಕೇಸ್​ನಲ್ಲಿ ಪ್ರಮುಖ ಆರೋಪಿಯಾದ ಸ್ವಾಮಿ ಸೇರಿ ಒಟ್ಟು 6 ಜನರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular