Thursday, July 23, 2026
Homeರಾಜ್ಯತುಮಕೂರು : ಭೀಕರ ಅಪಘಾತ : ಕಾರು ನಿಯಂತ್ರಣ ತಪ್ಪಿ ಪಲ್ಟಿ , ಇಬ್ಬರು ಶಿಕ್ಷಕರು...

ತುಮಕೂರು : ಭೀಕರ ಅಪಘಾತ : ಕಾರು ನಿಯಂತ್ರಣ ತಪ್ಪಿ ಪಲ್ಟಿ , ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು.

ತುಮಕೂರು : ತುಮಕೂರಿನಿಂದ ಮದುವೆ ಆರತಕ್ಷತೆ ಕಾರ್ಯಕ್ರಮ ಮುಗಿಸಿ ಪಾವಗಡಕ್ಕೆ ವಾಪಸ್ಸು ಹೋಗುತ್ತಿರುವಾಗ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವನಪ್ಪಿದ ದುರ್ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಣಿವೆನಹಳ್ಳಿ ಗೇಟ್ ಬಳಿ ನಡೆದಿದೆ.

ನಾಲ್ವರೂ ತುಮಕೂರಿನಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡು ಪಾವಗಡಕ್ಕೆ ತೆರಳುತ್ತಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಗುಚಿದೆ. ಕಾರು ಪಲ್ಟಿಯಾದ ತೀವ್ರತೆಗೆ ಪಾವಗಡ ತಾಲ್ಲೂಕಿನ ಗೌಡೇಟಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಒ. ಧನಂಜಯ ಹಾಗೂ ಶ್ರೀಕೃಷ್ಣ ಅವರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ ನರಸಿಂಹ ಹಾಗೂ ವೆಂಕಟಾಚಲಪತಿ ಎಂಬುವರ ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಪಲ್ಟಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಾಜುಗುಜ್ಜಾಗಿದೆ.

ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿನೀಡಿದ್ದು,ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular