ದಾವಣಗೆರೆ : ರಾಜ್ಯದಲ್ಲಿ ಶೇ.9೦ರಷ್ಟು ಮಸೀದಿಗಳ ಕಾನೂನುಬಾಹಿರವಾಗಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಇವುಗಳನ್ನು ಸ್ವಚ್ಛ ಮಾಡಲು ಜೆಸಿಬಿ ಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಚನ್ನಗಿರಿ ತಾಲ್ಲೂಕಿನ ಮರಡಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ
ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಸ್ಲಿಂರ ತುಷ್ಟೀಕರಣದಲ್ಲಿಯೇ ಕಾಲಹರಣ ಮಾಡುತ್ತಿದೆ. ಹಿಂದೂ ಮತ್ತು ಮುಸ್ಲಿಂರಿಗೆ ತಾರತಮ್ಯದ ಕಾನೂನು ಯೋಜನೆಗಳನ್ನು ಅನುಸರಿಸುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಕಾನೂನುಬಾಹಿರವಾಗಿ ನಡೆಯುತ್ತಿರುವ ಮಸೀದಿಗಳನ್ನು ಜೆಸಿಬಿ ಮುಖಾಂತರ ಸ್ವಚ್ಛಗೊಳಿಸುತ್ತೇವೆ ಎಂದರು.


