Sunday, August 2, 2026
Homeರಾಜ್ಯಧಾರವಾಡ : ಭೀಕರ ರಸ್ತೆ ಅಪಘಾತ : ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ,...

ಧಾರವಾಡ : ಭೀಕರ ರಸ್ತೆ ಅಪಘಾತ : ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ, ಹಲವರಿಗೆ ಗಂಭೀರ ಗಾಯ.

ಧಾರವಾಡ : ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ.

ಹುಬ್ಬಳ್ಳಿಯಿಂದ ವಿಜಯಪುರದತ್ತ ತೆರಳುತ್ತಿದ್ದ ಸಾರಿಗೆ ಬಸ್ ಹೆದ್ದಾರಿ ಪಕ್ಕದಲ್ಲಿ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ಬಳಿಕ ಬಸ್‌ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಕಿಟಕಿಗಳ ಮೂಲಕ ಹೊರತೆಗೆದು ಸಾರ್ವಜನಿಕರು ರಕ್ಷಣೆ ಮಾಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular