Thursday, May 28, 2026
Flats for sale
Homeರಾಜ್ಯಧಾರವಾಡ : ಯುವಕನ ಮೇಲೆ ಗುಂಡಿನ ದಾಳಿ ಪ್ರಕರಣ ; ಪೋಲಿಸ್ ಕಮಿಷನರ್ ಎನ್ ಶಶಿಕುಮಾರ್...

ಧಾರವಾಡ : ಯುವಕನ ಮೇಲೆ ಗುಂಡಿನ ದಾಳಿ ಪ್ರಕರಣ ; ಪೋಲಿಸ್ ಕಮಿಷನರ್ ಎನ್ ಶಶಿಕುಮಾರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ.

ಧಾರವಾಡ : ಧಾರವಾಡದಲ್ಲಿ ಯುವಕನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಿಜೆಪಿ ಮುಖಂಡ ವಿರೇಶ್ ಅಂಚಟಗೇರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪ್ರತಿಭಟನಾಕಾರರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಭಾವಚಿತ್ರಗಳಿಗೂ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರ ಆರೋಪದ ಪ್ರಕಾರ, ರೈತನ ಭೂಮಿ ಕಬಳಿಕೆ ಉದ್ದೇಶದಿಂದ ಯುವಕನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಸುಂದರಪೌಲ್ ವಿರುದ್ಧ ಈವರೆಗೆ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರಿದರು.

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. “ಕಮಿಷನರ್ ಹಠಾವೋ – ಹು-ಧಾ ಬಚಾವೋ” ಎಂಬ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ತಡಸಿನಕೊಪ್ಪ ಗ್ರಾಮದ ನಿವಾಸಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular