Friday, April 17, 2026
Flats for sale
Homeಕ್ರೈಂಧಾರವಾಡ : ಯೋಗೇಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ಶಾಸಕ ವಿನಯ್ ಕುಲಕರ್ಣಿ...

ಧಾರವಾಡ : ಯೋಗೇಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಧಾರವಾಡ : ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 19ನೇ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ 7 ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ.

ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ ತೀರ್ಪಿನಲ್ಲಿ ಒಟ್ಟು 17 ಮಂದಿಯನ್ನು ದೋಷಿಗಳೆಂದು ಘೋಷಿಸಲಾಗಿದ್ದು, ಎ1 ಬಸವರಾಜ ಮುತ್ತಗಿ ಅವರನ್ನು ಮಾಫಿ ಸಾಕ್ಷಿಯಾಗಿ ಕೋರ್ಟ್ ಮಾನ್ಯತೆ ನೀಡಿದೆ. ಜೊತೆಗೆ ಯೋಗೇಶ್ ಗೌಡ ಅವರ ಮಕ್ಕಳಿಗೆ ₹16 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಈ ತೀರ್ಪು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಪ್ರಜಾ ಪ್ರತಿನಿಧಿ ಕಾಯ್ದೆಯಡಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವೂ ರದ್ದಾಗುವ ಪರಿಸ್ಥಿತಿ ಎದುರಾಗಿದೆ.

ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದು, ಇವರ ಪೈಕಿ ಇಬ್ಬರು ಮಾಫಿ ಸಾಕ್ಷಿಯಾಗಿದ್ದಾರೆ. 19 ಆರೋಪಿಗಳನ್ನು ದೋಷಿಗಳೆಂದು ಕೋರ್ಟ್ ತೀರ್ಪು ನೀಡಿದೆ. ಎ17 ಶಿವಾನಂದ ವಿರುದ್ಧ ಸಿಬಿಐ ಮರು ಆರೋಪ ಮಾಡಲು ಅರ್ಜಿ ಸಲ್ಲಿಸಿದೆ. ಇನ್ನು ಎ20 ವಾಸುದೇವ ನಿಲೇಕಣಿ ಮತ್ತು ಎ21 ಸೋಮಶೇಖರರನ್ನು ಬಿಡುಗಡೆ ಮಾಡಲಾಗಿದೆ.

ಶಿಕ್ಷೆ ಘೋಷಣೆ ಬಳಿಕ, ಕಳೆದ ಮೂರು ದಿನಗಳಿಂದ ಒಂದೇ ಬಟ್ಟೆಯಲ್ಲಿ ಇರುವುದಾಗಿ ತಿಳಿಸಿದ ವಿನಯ್ ಕುಲಕರ್ಣಿ ಪರ ವಕೀಲರು ಬಟ್ಟೆ ಬದಲಿಸಲು ಅವಕಾಶ ಕೋರಿ ಮನವಿ ಮಾಡಿದರು. ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ನಿಯಮಾನುಸಾರ ಬಟ್ಟೆ ಒದಗಿಸಲು ಸೂಚಿಸಿದೆ. ಪ್ರತಿ ಆರೋಪಕ್ಕೂ ಪ್ರತ್ಯೇಕ ದಂಡವೂ ವಿಧಿಸಲಾಗಿದೆ.

ಪ್ರಕರಣದ ಹಿನ್ನೆಲೆ:
2016ರ ಜೂನ್ 15ರಂದು ಧಾರವಾಡದ ಸಪ್ತಾಪುರ ಬಡಾವಣೆಯ ಜಿಮ್‌ನಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಆರಂಭದಲ್ಲಿ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಳಿಕ 2019ರಲ್ಲಿ ಸಿಬಿಐ ತನಿಖೆಗೆ ಹಸ್ತಾಂತರಿಸಲಾಯಿತು. ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬ ಅಂಶ ಬಹಿರಂಗವಾಗಿದ್ದು, 2020ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ನಂತರ ಜಾಮೀನು ಪಡೆದು ಹೊರಬಂದಿದ್ದ ಅವರು, ಇದೀಗ ನ್ಯಾಯಾಲಯದ ತೀರ್ಪಿನಲ್ಲಿ ದೋಷಿ ಎನಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular