ಧಾರವಾಡ : ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಧಾರವಾಡಕ್ಕೆ ಬಂದಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತರನ್ನು ಮರು ಕಲಬುರಗಿ (25) ಎಂದು ಗುರುತಿಸಲಾಗಿದ್ದು, ಅವರು ಯಾದಗಿರಿ ಜಿಲ್ಲೆಯ ಸುರಪುರ ಮೂಲದವರು ಎಂದು ತಿಳಿದುಬಂದಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ಧಾರವಾಡದಲ್ಲಿ ವಾಸವಾಗಿದ್ದ ಮರು ಕಲಬುರಗಿ, ತಮ್ಮ ಕೊಠಡಿಯಲ್ಲಿ ಇದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಸಿದರೂ, ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯುವ ವಯಸ್ಸಿನಲ್ಲೇ ಸಂಭವಿಸಿದ ಈ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಶೋಕ ಮಡುಗಟ್ಟಿಸಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


