ನವದೆಹಲಿ : ದೆಹಲಿ ಸರ್ಕಾರದ ಮದ್ಯನೀತಿ ಅನುಷ್ಠಾಣದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಏಳನೇ ಬಾರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಅಬಕಾರಿ ನೀತಿ ಅನುಷ್ಠಾನ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಫೆಬ್ರವರಿ 26 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈ ಮುಂಚಿನ 6 ಸಮನ್ಸ್ ಗೂ ಕೇಜ್ರಿವಾಲ್ ಗೈರು ಹಾಜರಾಗುವ ಮೂಲಕ ಕೇಂದ್ರ ಸರ್ಕಾರದ ನಡೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.
ಕಳೆದ ರಾತ್ರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸಮನ್ಸ್ ಜಾರಿ ಮಾಡಿದೆ. ಇದಕ್ಕೂ ಮುನ್ನ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿತ್ತು ಮತ್ತು ವಿಶೇಷ ಬಜೆಟ್ ಅಧಿವೇಶನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ನ್ಯಾಯಾಲಯಕ್ಕೆ ತಿಳಿಸಿ ೬ನೇ ಸಮನ್ಸ್ನಿಂದ ಪಾರಾಗಿದ್ದರು.
ದೆಹಲಿ ಸಚಿವ ಸೌರಭ್ ಭಾರದ್ವಾಜ್ ಮಾತನಾಡಿ ಮಾರ್ಚ್ 16 ರವರೆಗೆ ಸಮಯ ನೀಡಲಾಗಿದೆ ಜಾರಿ ನಿರ್ದೇಶನಾಲಯ, ನ್ಯಾಯಾಲಯದ ಆದೇಶವನ್ನು ಗೌರವಿಸಲಿಲ್ಲ ಎಂದು ಆರೋಪಿಸಿದ್ದಾರೆ.ಮುಖ್ಯಮAತ್ರಿ ಅರವಿಂದ ಕೇಜ್ರಿವಾಲ್ ಅವರ ಇಬ್ಬರು ಹಿರಿಯ ಸಹೋದ್ಯೋಗಿಳಾದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು 100 ಕೋಟಿ ರೂಪಾಯಿ ಲಂಚದ ಆರೋಪಕ್ಕೆ ಸಂಬAಧಿಸಿದAತೆ ಬಂಧಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಫೆಬ್ರವರಿ 19 ರಂದು ಜಾರಿ ನಿರ್ದೇಶನಾಲಯ ಆರನೇ ಸಮನ್ಸ್ ವಿಚಾರಣೆಗೆ ಹಾಜರಾಗಲು ಮುಖ್ಯಮಂತ್ರಿ ಅರವಿAದ ಕೇಜ್ರಿವಾಲ್ ನಿರಾಕರಿಸಿದ್ದರು. ನ್ಯಾಯಾಲಯ ಮಾರ್ಚ್ 16 ಕ್ಕೆ ಹೊಸ ವಿಚಾರಣೆಯ ದಿನಾಂಕವನ್ನು ನೀಡಿದೆ ಎಂದು ಹೇಳಿದ್ದಾರೆ.
“ನ್ಯಾಯಾಲಯದ ಮುಂದೆ ಇರುವ ಪ್ರಶ್ನೆಯು ಸಮನ್ಸ್ಗಳ ಸಿಂಧುತ್ವದ ಬಗ್ಗೆ ಅಲ್ಲ, ಬದಲಿಗೆ ಅರವಿಂದ್ ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೊದಲ ಮೂರು ಸಮನ್ಸ್ಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ಅರವಿAದ್ ಕೇಜ್ರಿವಾಲ್ ವಿರುದ್ಧ ಐಪಿಸಿಯ 174 ರ ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ


