Saturday, October 31, 2026
Homeವಾಣಿಜ್ಯನವದೆಹಲಿ : ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ರಾಹುಲ್ ಗಾಂಧಿ ವಿರೋಧ: ನಿರ್ಮಲಾ ಸೀತಾರಾಮನ್ ತಿರುಗೇಟು..!

ನವದೆಹಲಿ : ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ರಾಹುಲ್ ಗಾಂಧಿ ವಿರೋಧ: ನಿರ್ಮಲಾ ಸೀತಾರಾಮನ್ ತಿರುಗೇಟು..!

ನವದೆಹಲಿ : ಐಡಿಬಿಐ ಬ್ಯಾಂಕ್‌ನ ಮಾರಾಟ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಡುವೆ ವಾಕ್ಸಮರ ನಡೆದಿದೆ.

ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಮಾರಾಟದ ವಸ್ತುಗಳಲ್ಲ, ಅವು ರಾಷ್ಟ್ರ ನಿರ್ಮಾಣದ ಪ್ರಮುಖ ಸಾಧನಗಳಾಗಿವೆ ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಬ್ಯಾಂಕ್‌ಗಳನ್ನು ನಿರ್ಮಿಸಿ ಬಲಪಡಿಸಲಾಗಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಅವುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅಭಿವೃದ್ಧಿ ಬ್ಯಾಂಕ್ ಆಗಿ ಆರಂಭಗೊಂಡಿದ್ದ ಐಡಿಬಿಐ ಬ್ಯಾಂಕ್ ವಾಣಿಜ್ಯ ಬ್ಯಾಂಕ್ ಆಗಿ ರೂಪಾಂತರಗೊಂಡ ಹಾದಿ ಸುಲಭವಾಗಿರಲಿಲ್ಲ ಎಂದೂ ಅವರು ಹೇಳಿದ್ದಾರೆ.

ರಾಹುಲ್ ಆರೋಪಕ್ಕೆ ನಿರ್ಮಲಾ ತಿರುಗೇಟು

ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳನ್ನು ವೈಯಕ್ತಿಕ ಘಟಕಗಳಂತೆ ಬಳಸಿಕೊಳ್ಳಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ.

ತಮ್ಮವರಿಗೆ ಅನುಕೂಲವಾಗುವಂತೆ ನಿಯಮಗಳನ್ನು ಮೀರಿ ಸಾಲ ನೀಡಲು ಬ್ಯಾಂಕ್ ಉದ್ಯೋಗಿಗಳ ಮೇಲೆ ಒತ್ತಡ ಹೇರಲಾಗುತ್ತಿತ್ತು. ಇದರಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮಸ್ಯೆಗಳು ಉಂಟಾಗಿದ್ದವು ಎಂದು ಕಾಂಗ್ರೆಸ್ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ, ಹಿಂದೆ ನಷ್ಟದಲ್ಲಿದ್ದ ಐಡಿಬಿಐ ಬ್ಯಾಂಕ್ ಕಳೆದ ವರ್ಷ ₹9,000 ಕೋಟಿಗೂ ಅಧಿಕ ಲಾಭ ಗಳಿಸಿದೆ ಎಂದು ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.

ಐಡಿಬಿಐ ಬ್ಯಾಂಕ್ ಮಾರಾಟದ ಪ್ರಸ್ತಾಪ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular