Friday, November 22, 2024
Flats for sale
Homeದೇಶನವದೆಹಲಿ : ದೆಹಲಿ ಮದ್ಯ ನೀತಿ ಹಗರಣ : ಸ್ಥಳೀಯ ನ್ಯಾಯಾಲಯ ನೀಡಿದ ಜಾಮೀನಿಗೆ ತಾತ್ಕಾಲಿಕ...

ನವದೆಹಲಿ : ದೆಹಲಿ ಮದ್ಯ ನೀತಿ ಹಗರಣ : ಸ್ಥಳೀಯ ನ್ಯಾಯಾಲಯ ನೀಡಿದ ಜಾಮೀನಿಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್​.

ನವದೆಹಲಿ : ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಅವರಿಗೆ ದೆಹಲಿ ಹೈಕೋರ್ಟ್​ ಶಾಕ್​ ನೀಡಿದೆ. ಸ್ಥಳೀಯ ನ್ಯಾಯಾಲಯ ನೀಡಿದ ಜಾಮೀನಿಗೆ ಹೈಕೋರ್ಟ್​ ತಾತ್ಕಾಲಿಕ ತಡೆ ನೀಡಿದೆ.

ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರ ಜಾಮೀನನ್ನು ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಕೂಡಲೇ ಹೈಕೋರ್ಟ್‌ನಿಂದ ವಿಚಾರಣೆ ನಡೆಸಬೇಕು ಎಂದು ಇಡಿ ಆಗ್ರಹಿಸಿತ್ತು. ಇಡಿ ಅರ್ಜಿಯನ್ನು ಹೈಕೋರ್ಟ್ ಸ್ವೀಕರಿಸಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಮಾರ್ಚ್ 21 ರಂದು ಬಂಧಿಸಿತ್ತು.

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10 ರಂದು ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಸುಪ್ರೀಂ ಕೋರ್ಟ್‌ಗೆ ಶರಣಾಗಿದ್ದರು. ಶರಣಾಗುವ ಮುನ್ನ ಅರವಿಂದ್ ಕೇಜ್ರಿವಾಲ್ ಒಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕೇಜ್ರಿವಾಲ್ ಅವರು ತಮ್ಮ ಮಧ್ಯಂತರ ಜಾಮೀನನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯ ಕೇಜ್ರಿವಾಲ್ ಮನವಿಯನ್ನು ತಿರಸ್ಕರಿಸಿತ್ತು.

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇ.ಡಿ. ಮಾರ್ಚ್ 21 ರಂದು ಬಂಧಿಸಿತ್ತು. ಇದಕ್ಕೂ ಮುನ್ನ 9 ಬಾರಿ ಸಮನ್ಸ್ ನೀಡಿದ್ದರೂ ಅ ವರು ತನಿಖಾ ಸಂಸ್ಥೆಯ ಮುಂದೆ ಹಾಜರಾಗಿರಲಿಲ್ಲ. ಇದಾದ ಬಳಿಕ ಅವರನ್ನು ಬಂಧಿಸಲಾಗಿತ್ತು. ಮಾರ್ಚ್ 22 ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಏಪ್ರಿಲ್ 1 ರಂದು ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular