ನವದೆಹಲಿ : ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ಅವರು ದೆಹಲಿಯ 4ನೇ ಮಹಿಳಾ ಸಿಎಂ ಆಗಿ ರಾಮಲೀಲಾ ಮೈದಾನದಲ್ಲಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರೇಖಾ ಗುಪ್ತಾ, ಮುಗುಳು ನಗುತ್ತಾ ಪ್ರಧಾನಿ ಮೋದಿಯವರ ಸಮ್ಮುಖದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಪ್ರಮಾಣ ವಚನ ಬೋಧಿಸಿದರು. ಗುರುವಾರ ಗುಪ್ತಾ ಅವರು ದೆಹಲಿ ಸಿಎಂ ಆಗಿ ಅಧಿಕಾರ ವಹಿಸಿಕೊಂಡರು. ದೆಹಲಿಯ ಸೆಕ್ರೆಟರಿಯೇಟ್‌ನಲ್ಲಿ ನೂತನ ಸರ್ಕಾರದ ಮೊದಲ ಸಂಪುಟ ಸಭೆ ಆರಂಭವಾಗಿದೆ.
ರೇಖಾ ಗುಪ್ತಾ ಅವರೊಂದಿಗೆ ಪರ್ವೇಶ್ ಸಾಹಿಬ್ ಸಿಂಗ್, ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದರ್ ಇಂದ್ರಜ್ ಸಿಂಗ್, ಕಪಿಲ್ ಮಿಶ್ರಾ ಮತ್ತು ಪಂಕಜ್ ಕುಮಾರ್ ಸಿಂಗ್ ಕೂಡ ದೆಹಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
2025ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 29,595 ಮತಗಳ ಅಂತರದಿಂದ ಎಎಪಿಯ ಬಂದಾನ ಕುಮಾರಿ ಅವರನ್ನು ಸೋಲಿಸುವ ಮೂಲಕ ಬಿಜೆಪಿಯ ರೇಖಾ ಗುಪ್ತಾ ಅವರು ಶಾಲಿಮಾರ್ ಬಾಗ್ ಅಸೆಂಬ್ಲಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭವು ಪ್ರಮುಖ ಕಾರ್ಯಕ್ರಮವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಮಹಾರಾಷ್ಟ್ರ ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅವರು ಉಪಸ್ಥಿತರಿದ್ದರು.