Wednesday, May 20, 2026
Flats for sale
Homeದೇಶನವದೆಹಲಿ : ದೇವಾಲಯ ಅರ್ಚಕರ ವೇತನ ಹೆಚ್ಚಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ವಿಚಾರಣೆ.

ನವದೆಹಲಿ : ದೇವಾಲಯ ಅರ್ಚಕರ ವೇತನ ಹೆಚ್ಚಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ವಿಚಾರಣೆ.

ನವದೆಹಲಿ : ದೇವಾಲಯಗಳ ಅರ್ಚಕರಿಗೆ ವೇತನ ನಿಗದಿ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುವ ಕುರಿತು ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳಲಿದೆ.

ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರನ್ನು ಒಳಗೊಂಡ ಪೀಠ ಈ ಅರ್ಜಿಯ ವಿಚಾರಣೆ ನಡೆಸಲಿದೆ.

ವಕೀಲ ಅಶ್ವಿನಿ ಉಪಾಧ್ಯಾಯ ಸಲ್ಲಿಸಿರುವ ಅರ್ಜಿಯಲ್ಲಿ, ದೇವಾಲಯ ಅರ್ಚಕರಿಗೆ ಗೌರವಯುತ ವೇತನ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಯೋಗವೊಂದನ್ನು ರಚಿಸಬೇಕು ಎಂದು ಮನವಿ ಮಾಡಲಾಗಿದೆ. ಅಲ್ಲದೆ, Code on Wages Act 2019ನ ಸೆಕ್ಷನ್ 2(ಕೆ) ಅನ್ವಯ ಅರ್ಚಕರಿಗೆ ಸಮರ್ಪಕ ವೇತನ ಮತ್ತು ಕಲ್ಯಾಣ ಸೌಲಭ್ಯಗಳನ್ನು ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular