ನವದೆಹಲಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಲು ನವದೆಹಲಿಯ ರೈಲು ನಿಲ್ದಾಣದಲ್ಲಿ 1500ಕ್ಕೂ ಅಧಿಕ ಮಂದಿ ಜಮಾಯಿಸಿದ ಹಿನ್ನೆಲೆಯಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಹಿಳೆಯರು, ನಾಲ್ಕು ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ. 12 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಉನ್ನತ ತನಿಖೆಗೆ ಆದೇಶಿಸಲಾಗಿದೆ.
ಘಟನೆ ನಡೆಯುವ ಮುನ್ನ ಏನಾಯಿತು ಎಂಬ ಬಗ್ಗೆ ತಿಳಿದುಕೊಳ್ಳಲು ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಲ್ತುಳಿತ ಸಂಭವಿಸಲು ಕಾರಣ ಏನೆಂಬುದನ್ನು ತಿಳಿದುಕೊಳ್ಳುವುದು ನಮ್ಮ ಮೊದಲ ಗುರಿಯಾಗಿದೆ. ಹೀಗಾಗಿ ಆ ಸಮಯದ ಸಿಸಿ ಟಿವಿ ದೃಶ್ಯಾವಳಿಗಳನ್ನು ಮತ್ತು ಧ್ವನಿ ಪ್ರಕಟಣೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ಲಾಟ್ಫಾರಂ ಬದಲಾವಣೆ ಬಗ್ಗೆ ಪ್ರಕಟಣೆ ಹೊರಡಿಸಿದ್ದರಿಂದ ಗೊಂದಲ ಉಂಟಾಗಿ ಕಾಲ್ತುಳಿತ ಸಂಭವಿಸಿರುವ ಸಾಧ್ಯತೆ ಇದೆ. 14 ಮತ್ತು 15 ರಂದು ಪ್ರಯಾಗ್ರಾಜ್ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಪಡಿಸಿರುವುದರಿಂದ ರೈಲ್ವೆ ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. ಈ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಘಟನೆ ಕುರಿತು ರೈಲ್ವೆ ಸಚಿವಾಲಯ ತನಿಖೆಗೆ ಆದೇಶಿಸಿ ಇಬ್ಬರು ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿದೆ.
ತಲಾ 10 ಲಕ್ಷ ರೂ. ಪರಿಹಾರ ಘಟನೆಯಲ್ಲಿ ಮೃತಪಟ್ಟವರಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಲಾಗಿದೆ. ಗಂಭೀರವಾಗಿ ಗಾಯಗೊAಡವರಿಗೆ ೨.೫ ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 1 ಲಕ್ಷ ಪರಿಹಾರವನ್ನು ರೈಲ್ವೆ ಇಲಾಖೆ ಪ್ರಕಟಿಸಿಗಿದೆ. ಎರಡು ರೈಲುಗಳ ವಿಳಂಬದಿAದ ಉAಟಾದ ಜನಸಂದಣಿ ಉಂಟಾದ ಹಿನ್ನೆಲೆಯಲ್ಲಿ ರೈಲು ಹತ್ತಲು ಜನರು ಮುಗಿಬಿದ್ದು ಹಿನ್ನೆಲೆಯಲ್ಲಿ ಈ ದುರಂತ ಸAಭಿಸಿದೆ. ಘಟನೆಯಲ್ಲಿ 18 ಜನರು ಸಾವನ್ನಪ್ಪಿದ್ದು ಒಂದು ಡಜನ್ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನವದೆಹಲಿ ರೈಲು ನಿಲ್ದಾಣದ 13 ಮತ್ತು 14 ನೇ ಪ್ಲಾಟ್ಫಾರ್ಮ್ಗಳು ಜನದಟ್ಟಣೆಯಿಂದ ಕೂಡಿದ್ದವು, ಸ್ವತಂತ್ರ ಸೇನಾನಿ ಮತ್ತು ಭುವನೇಶ್ವರ ರಾಜಧಾನಿ ಎರಡು ರೈಲು ವಿಳಂಬವಾದ ಹಿನ್ನೆಲೆಯಲ್ಲಿ ಮಹಾಕುಂಭಕ್ಕಾಗಿ ವಿಶೇಷ ರೈಲು ಪ್ರಯಾಗ್ರಾಜ್ ಎಕ್ಸ್ಪ್ರೆಸ್ ರಾತ್ರಿ 10:10 ಕ್ಕೆ ಪ್ಲಾಟ್ಫಾರ್ಮ್ ಸಂಖ್ಯೆ 14 ರಿಂದ ಹೊರಡಬೇಕಿತ್ತು. ಆ ರೈಲು ಹತ್ತಲು ಜನರು ಏಕಾಏಕಿ ಮುಗಿಬಿದ್ದ ಹಿನ್ನೆಲೆಯಲ್ಲಿ ಕಾಲ್ತುಳಿತ ಸಂಭವಿಸಿದೆ. ಪ್ರಯಾಗ್ರಾಜ್ಗೆ ರೈಲು ಹೊರಡುವ ಸಮಯ ಹತ್ತಿರವಾಗುತ್ತಿದ್ದಂತೆ, ಹೆಚ್ಚು ಹೆಚ್ಚು ಜನರು ಪ್ಲಾಟ್ಫಾರ್ಮ್ನಲ್ಲಿ ಸೇರಲು ಪ್ರಾರಂಭಿಸಿದರು, ತುಂಬಿ ತುಳುಕುತ್ತಿದ್ದ ರೈಲು ನಿಲ್ದಾಣದಲ್ಲಿ ಮತ್ತಷ್ಟು ಜನರು ಸೇರಿದ್ದರಿಂದ ಜನರು ರೈಲು ಹತ್ತಲು ಹರಸಾಹಸ ನಡೆಸಿದ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
12 ವರ್ಷಗಳಿಗೊಮ್ಮೆ ಮಾತ್ರ ನಡೆಯುವ ಮಹಾ ಕುಂಭಕ್ಕಾಗಿ ವಿಶೇಷ ರೈಲುಗಳನ್ನು ವ್ಯವಸ್ಥೆ
ಮಾಡಲಾಗುತ್ತಿರುವುದರಿಂದ ಇತ್ತೀಚೆಗೆ ಇದೇ ರೀತಿಯ ಘಟನೆಗಳು ನಡೆಯುತ್ತಿವೆ. ಈ ವಾರದ ಆರಂಭದಲ್ಲಿ, ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಕೆಲವು ಪ್ರಯಾಣಿಕರು ರೈಲು ಹತ್ತಲು ಸಾಧ್ಯವಾಗದ ಕಾರಣ, ಪ್ರಯಾಗ್ರಾಜ್ ಮೂಲಕ ದೆಹಲಿಗೆ ಹೋಗುವ ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ನ ಗಾಜಿನ ಕಿಟಕಿಗಳನ್ನು ಒಡೆದು ಹಾಕಿದ್ದರು.