Monday, July 20, 2026
Homeದೇಶನವದೆಹಲಿ : ಬಿಜೆಪಿ ಪಕ್ಷ ಅಧಿಕಾರದಲ್ಲಿ ಉಳಿಯಲು ಯಾವುದೇ ಹಂತಕ್ಕೆ ಹೋಗಲು ಸಿದ್ಧ : ಖರ್ಗೆ..!

ನವದೆಹಲಿ : ಬಿಜೆಪಿ ಪಕ್ಷ ಅಧಿಕಾರದಲ್ಲಿ ಉಳಿಯಲು ಯಾವುದೇ ಹಂತಕ್ಕೆ ಹೋಗಲು ಸಿದ್ಧ : ಖರ್ಗೆ..!

ನವದೆಹಲಿ : ಆಡಳಿತಾರೂಢ ಬಿಜೆಪಿ ಪಕ್ಷ ಅಧಿಕಾರದಲ್ಲಿ ಉಳಿಯಲು ಯಾವುದೇ ಹಂತಕ್ಕೆ ಹೋಗಲು ಸಿದ್ಧವಾಗಿದೆ. ಇದರ ಪರಿಣಾಮಗಾಗಿ ದೇಶಾದ್ಯಂತ ಚುನಾವಣೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದರು.

ಕಾಂಗ್ರೆಸ್‌ನ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ೭೯ನೇ ಸ್ವಾತಂತ್ರö್ಯ ದಿನಾಚರಣೆಯ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನೆಪದಲ್ಲಿ ವಿಪಕ್ಷಗಳ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಿದ್ದಾರೆ. ಜೀವಂತ ಇರುವ ವ್ಯಕ್ತಿಗಳನ್ನು ಸತ್ತಿದ್ದಾರೆಂದು ಘೋಷಿಸಲಾಗಿದೆ ಆರೋಪಿಸಿದರು.

65 ಲಕ್ಷ ಜನರ ಮತಗಳು ಕಡಿತಗೊಂಡಿರುವುದಕ್ಕೆ ಬಿಜೆಪಿಗೆ ಯಾವುದೇ ಆಕ್ಷೇಪವಿಲ್ಲ. ಯಾರು ಹೆಚ್ಚು ಲಾಭ ಪಡೆದಿದ್ದಾರೆ ಎಂದು ಇದರಿಂದಲೇ ತಿಳಿಯುತ್ತದೆ. ನಮ್ಮ ಹೋರಾಟ ಚುನಾವಣೆ ಗೆಲ್ಲುವುದಕ್ಕೆ ಅಲ್ಲ. ಬದಲಾಗಿ ಪ್ರಜಾಪ್ರಭುತ್ವ ಉಳಿಸಲು ಹಾಗೂ ಸಂವಿಧಾನ ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದೇವೆ ಎಂದು ನುಡಿದರು. ಸದ್ಯ ಆಡಳಿತಾರೂಢ ಬಿಜೆಪಿ ಅಧಿಕಾರದಲ್ಲಿರಲು ಯಾವುದೇ ಹಂತಕ್ಕೆ ಇಳಿಯಲು ಸಜ್ಜಾಗಿದೆ. ಚುನಾವಣೆಗಳಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿರುವುದು ಈಗ ಬೆಳಕಿಗೆ ಬರುತ್ತಿವೆ ಎಂದು ವಾಗ್ದಾಳಿ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular