ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಪ್ರಬಲ ನಾಯಕತ್ವ ಭ್ರಷ್ಟಾಚಾರ ರಹಿತ 10 ವರ್ಷಗಳ ಆಡಳಿತ ರಾಹುಲ್ಗಾಂಧಿ ವಿಫಲ ನಾಯಕತ್ವಕ್ಕೆ ಕಾಂಗ್ರೆಸ್ ಮನ್ನಣೆ 28 ಪಕ್ಷಗಳ I.N.D.I.A ಮೈತ್ರಿಕೂಟ ಛಿದ್ರವಾಗಿದ್ದು ದೇಶದಲ್ಲಿ ಪ್ರಬಲ ವಿರೋಧ ಪಕ್ಷದ ಕೊರತೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಭಾರಿ ವೇಗದಲ್ಲಿ ರಸ್ತೆ, ರೈಲ್ವೆ ಸೌಕರ್ಯ ಅಭಿವೃದ್ದಿ ವಿಶ್ವದಲ್ಲೇ ಅತಿ ವೇಗವಾಗಿ ಆರ್ಥಿಕ ಬೆಳವಣಿಗೆ ಮೋದಿ ಬಗ್ಗೆ ವಿಶ್ವದ ನಾಯಕರಿಂದ ಪ್ರಶಂಸೆ ಭಾರತದ ಬಗ್ಗೆ ವಿಶ್ವ ನೋಡುವ ನೋಟ ಬದಲಾವಣೆ ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ ಭಾರತದಂತಹ ಯೋಜನೆಗಳು ರೈತರಿಗೆ, ಮಹಿಳೆಯರಿಗೆ, ವೃದ್ದರಿಗೆ ಕೇಂದ್ರ ಯೋಜನೆಗಳ ನೇರ ಲಾಭ ಬಿಜೆಪಿ ಬಹುಸಂಖ್ಯಾತ ಹಿಂದುತ್ವದ ಪರ, ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ 2047ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಬದಲಾವಣೆ ಭರವಸೆಗೆ ಜನಸಾಮನ್ಯರು ಮರುಳಾಗಿದ್ದು ದೇಶಾಭಿಮಾನ ಜನರಲ್ಲಿ ಮೂಡಿದೆ ಎಂದು ಜನಸಾಮನ್ಯರ ಮಾತಲ್ಲಿ ತಿಳಿಸಿದ್ದಾರೆ.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಈ ಬಾರಿ ಫಲಿಸಲು ಸಾಧ್ಯವಿಲ್ಲ ಎಂದು ದೇಶದ ಅತ್ಯುನ್ನತ್ತ ಸಮೀಕ್ಷೆ ಬಹಿರಂಗ ಪಡಿಸಿದೆ. ಈ ಬಾರಿ ಬಿಜೆಪಿಯನ್ನು ಮಣಿಸಲೇಬೇಕೆಂದು ಇಂಡಿಯಾ ಒಕ್ಕೂಟ ಸಜ್ಜಾಗಿದ್ದು ಇದರ ಮಧ್ಯೆ ಚುನಾವಣಾ ಪೂರ್ವ ಸಮೀಕ್ಷೆಗಳು ಹೊರಬಿದ್ದಿದೆ.ಇಂಡಿಯಾ ಮೈತ್ರಿ ಕೂಟದಿಂದ ಹಲವಾರು ನಾಯಕರು ಹೊರಬಂದಿದ್ದ ಕಾರಣ ಸೀಟು ಹಂಚಿಕೆಯ ವಿಚಾರದಲ್ಲಿ ಕಾಂಗ್ರೆಸ್ ಗೆ ಮುಖಭಂಗವಾಗಿದೆ ಎಂದು ವರದಿಯಲ್ಲಿದೆ. ಕಾಂಗ್ರೆಸ್ ಸರಕಾರದ ಕಳೆದ 10 ವರ್ಷದ ಮೊದಲಿನ ಭ್ರಷ್ಟಾಚಾರ ಇನ್ನು ಜನರ ಮನಸ್ಸಿಂದ ಹೊರಗುಳಿಯದಿರುವುದು ,ಹಾಗೂ ಪ್ರಧಾನಿ ನರೇಂದ್ರ ಮೋದಿಯರವರ ಅಭಿವೃದ್ಧಿಯ ಕಾರ್ಯಕ್ರಮ ,ದೇಶದ ಆರ್ಥಿಕ ಬೆಳವಣಿಗೆ ,ಹಾಗೂ ಕಾಂಗ್ರೆಸ್ ಸರಕಾರದ ವೈಫಲ್ಯ ಎಲ್ಲಾ ವಿಚಾರಗಳು ಇಲ್ಲಿ ಕಾಣಿಸುತ್ತಿದೆ.
ಇಂಡಿಯಾ ಟುಡೇ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಪ್ರಕಾರ ಎನ್ಡಿಎ ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ. ಎನ್ಡಿಎ ಬಹುಮತ ಪಡೆಯಲಿದೆ. ಬಿಜೆಪಿ ನೇತೃತ್ವದ ಎನ್ಡಿಎ 335 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಎಂದು ಸಮೀಕ್ಷೆ ಹೊರಬಿದ್ದಿದೆ .ಆದಾಗ್ಯೂ, ಒಟ್ಟಾರೆಯಾಗಿ ಎನ್ಡಿಎ ಮೈತ್ರಿಕೂಟವು ಈ ಬಾರಿ 18 ಸ್ಥಾನಗಳನ್ನು ಕಳೆದುಕೊಳ್ಳಲಿದ್ದು, ಇಂಡಿಯಾ ಒಕ್ಕೂಟಕ್ಕೆ ಲಾಭದಾಯಕವಾಗಿದೆ ಎಂದು ತಿಳಿಯಲಾಗಿದೆ.
ಇಂಡಿಯಾ ಟುಡೇ ಪ್ರಕಾರ ಯಾರು ಎಷ್ಟು ಗೆಲ್ಲಲಿದ್ದಾರೆ?
ಪೂರ್ವ ಭಾರತದಲ್ಲಿನ 153 ಲೋಕಸಭಾ ಸ್ಥಾನಗಳಲ್ಲಿ ಎನ್ಡಿಎ 103 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ ಮತ್ತು ಇಂಡಿಯಾ ಒಕ್ಕೂಟ 38 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಹನ್ನೆರಡು ಸ್ಥಾನಗಳನ್ನು ಇತರೆ ಪಕ್ಷಗಳು ಅಥವಾ ಪಕ್ಷೇತರರು ಗೆಲ್ಲುವ ಸಾಧ್ಯತೆ ಇದೆ. ಉತ್ತರ ಭಾರತದ 180 ಲೋಕಸಭಾ ಸ್ಥಾನಗಳ ಪೈಕಿ ಎನ್ಡಿಎ 154 ಸ್ಥಾನಗಳಲ್ಲಿ ಗೆದ್ದರೆ ಇಂಡಿಯಾ ಒಕ್ಕೂಟ 25 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ತಿಳಿಸಿದೆ.ಪಶ್ಚಿಮ ಭಾರತದಲ್ಲಿ 78 ಲೋಕಸಭಾ ಸ್ಥಾನಗಳಲ್ಲಿ, ಎನ್ಡಿಎ 51 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದ್ದು, ಇಂಡಿಯಾ ಒಕ್ಕೂಟ 27 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ.
ದಕ್ಷಿಣ ಭಾರತದಲ್ಲಿ 132 ಲೋಕಸಭಾ ಸ್ಥಾನಗಳಲ್ಲಿ ಎನ್ಡಿಎ 27 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದ್ದು, ಇಂಡಿಯಾ ಒಕ್ಕೂಟ 76 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಇನ್ನು 29 ಸ್ಥಾನಗಳನ್ನು ಇತರ ಪಕ್ಷಗಳು ಅಥವಾ ಪಕ್ಷೇತರ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಯಿದೆ
ಕಳೆದ ಚುನಾವಣೆಯಲ್ಲಿ ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಕರ್ನಾಟಕದಲ್ಲಿ 25 ಮತ್ತು ತೆಲಂಗಾಣದಲ್ಲಿ 4 ಸ್ಥಾನಗಳನ್ನು ಗೆದ್ದಿತ್ತು. ದಕ್ಷಿಣ ಭಾರತದ ಇತರ ಮೂರು ರಾಜ್ಯಗಳಲ್ಲಿ ಅಂದರೆ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಎನ್ಡಿಎ ಖಾತೆ ತೆರೆದಿರಲಿಲ್ಲ ಆದರೆ ಈ ಬಾರಿ ಅನೇಕ ಸ್ಥಳಗಳಲ್ಲಿ ಹೊಸ ಖಾತೆ ತೆರೆಯಲಿದೆ ಎಂದು ಸಮೀಕ್ಷೆಯಲ್ಲಿದೆ.


