ನವದೆಹಲಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸದಲ್ಲಿರುವ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.ಬಳಿಕ ಮಾತನಾಡಿದ ಅವರು ರಾಹುಲ್ ಗಾಂಧಿ ಸಚಿವ ಸಂಪುಟ ಪುನಾರಚನೆಗೆ ಒಪ್ಪಿಗೆ ನೀಡಿದ್ದಾರೆ ಎಂದು ಮಾಹಿತಿ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಚರ್ಚಿಸಿ ಸಂಪುಟ ಪುನಾರಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.


