Sunday, July 26, 2026
Homeವಿದೇಶನವದೆಹಲಿ : ರಾಹುಲ್ ಗಾಂಧಿಯನ್ನು ಹಾಡಿ ಹೊಗಳಿದ ಪಾಕ್‌ ಸಚಿವ ಚೌಧರಿ ಫವಾದ್ ,ಕಾಂಗ್ರೆಸ್ ವಿರುದ್ಧ...

ನವದೆಹಲಿ : ರಾಹುಲ್ ಗಾಂಧಿಯನ್ನು ಹಾಡಿ ಹೊಗಳಿದ ಪಾಕ್‌ ಸಚಿವ ಚೌಧರಿ ಫವಾದ್ ,ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ.

ನವದೆಹಲಿ : ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸಂಪುಟದ ಮಾಜಿ ಸಚಿವ ಚೌಧರಿ ಫವಾದ್ ಹುಸೇನ್ಅ ವರು ರಾಹುಲ್ ಗಾಂಧಿಯನ್ನು ಹೊಗಳಿದ್ದಾರೆ, ಇದರಿಂದಾಗಿ ರೊಚ್ಚಿಗೆದ್ದ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಫವಾದ್ ತಮ್ಮ ಎಕ್ಸ್ ಖಾತೆಯಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಡಿಯೋವನ್ನು ಹಂಚಿಕೊAಡಿದ್ದಾರೆ. ರಾಹುಲ್ ಆನ್ ಫೈರ್ ಎಂದೂ ಬರೆದಿದ್ದಾರೆ.

ಬಿಜೆಪಿ ನಾಯಕರು ಇದರ ಸ್ಕ್ರೀನ್ ಶಾಟ್ ತೆಗೆದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಎಂದು ವ್ಯಂಗ್ಯವಾಡಿದ್ದಾರೆ.ರಾಹುಲ್ ಗಾಂಧಿ ಭಾಷಣದ ವಿಡಿಯೋ ತುಣುಕನ್ನು ಫವಾದ್ ಹುಸೇನ್ ಹಂಚಿಕೊಂಡಿದ್ದಕ್ಕೆ ಮತ್ತೊಬ್ಬ ಬಿಜೆಪಿ ನಾಯಕ ವಿಷ್ಣು ವರ್ಧನ್ ರೆಡ್ಡಿ ಕೂಡ ಪ್ರತಿಕ್ರಿಯಿಸಿದ್ದಾರೆ.

ಇದು ಕಾಂಗ್ರೆಸ್ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಮಾಜಿ ಸಚಿವ ಇಮ್ರಾನ್ ಖಾನ್ ಸಂಪುಟ ಹಾಗೂ ಚೌಧರಿ ಫವಾದ್ ಹುಸೇನ್ ಇದೀಗ ರಾಹುಲ್ ಗಾಂಧಿ ಪರ ಪ್ರಚಾರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪಾಕಿಸ್ತಾನದ ಮಾಜಿ ಸಚಿವರೊಬ್ಬರು ಶೇರ್ ಮಾಡಿರುವ ವಿಡಿಯೋದಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಆಹ್ವಾನಿತರ ಬಗ್ಗೆ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಎಡಿಟ್ ಮಾಡಿದ ವಿಡಿಯೋದಲ್ಲಿ ರಾಹುಲ್ ಗಾಂಧಿ ರಾಮಮAದಿರ ಉದ್ಘಾಟನೆ ಕುರಿತು ಮಾತನಾಡುತ್ತಿರುವುದನ್ನು ಕಾಣಬಹುದು. ಇದರಲ್ಲಿ ಬಿಜೆಪಿ ಸರ್ಕಾರ ಬಡವರು ಮತ್ತು ಯುವಕರ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular