ನವದೆಹಲಿ : ಚುನಾವಣಾ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ವಿರೋಧ ಪಕ್ಷಗಳ ಇಂಡಿಯಾ ಕೂಟದ ಪರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಜಂಟಿ ಅರ್ಜಿಯಲ್ಲಿ 14 ಲೋಪಗಳು ಕಂಡುಬಂದಿವೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಅರ್ಜಿಯಲ್ಲಿ ಹಲವು ತಾಂತ್ರಿಕ ಲೋಪಗಳಿರುವುದರ ಜೊತೆಗೆ, ನ್ಯಾಯಾಲಯಕ್ಕೆ ಪಾವತಿಸಬೇಕಾದ ಶುಲ್ಕದಲ್ಲೂ ₹220 ಕಡಿಮೆ ಪಾವತಿಯಾಗಿರುವುದು ಗಮನಕ್ಕೆ ಬಂದಿದೆ.
ಅರ್ಜಿಯಲ್ಲಿರುವ ಲೋಪಗಳ ಪೈಕಿ, ಒಂಬತ್ತು ಅರ್ಜಿದಾರರ ಅಧಿಕೃತ ಒಪ್ಪಿಗೆ ಪತ್ರಗಳು ಸಲ್ಲಿಕೆಯಾಗಿಲ್ಲ. ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗುರುತಿನ ಚೀಟಿಯ ಪ್ರತಿಯೂ ಸ್ಪಷ್ಟವಾಗಿ ಕಾಣಿಸುತ್ತಿಲ್ಲ ಎನ್ನಲಾಗಿದೆ.
ಚುನಾವಣಾ ಅಕ್ರಮಗಳು ಮತ್ತು ಎಸ್‌ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಈ ಜಂಟಿ ಅರ್ಜಿಯಲ್ಲಿ ಒಟ್ಟು 14 ಲೋಪಗಳನ್ನು ಗುರುತಿಸಲಾಗಿದೆ ಎಂದು ವರದಿಯಾಗಿದೆ.

