ನವದೆಹಲಿ : ಅಕ್ರಮ ಹಣ ವರ್ಗಾವಣೆ ತನಿಖೆಯ ತೀವ್ರ ಹಂತದಲ್ಲಿ, ಜಾರಿ ನಿರ್ದೇಶನಾಲಯವು ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಯವರ ಮುಂಬೈನ ೧೭ ಅಂತಸ್ತಿನ 3716 ಕೋಟಿ ಮೌಲ್ಯದ `ಅಬೋಡ್’ ನಿವಾಸವನ್ನು ಮುಟ್ಟುಗೋಲು ಹಾಕಿಕೊಂಡಿದೆ.
ರಿಲಯನ್ಸ್ ಕಮ್ಯುನಿಕೇಷನ್ಸ್ ಗ್ರೂಪ್ ಒಳಗೊಂಡ ಕೋಟಿ ರೂ. ಬ್ಯಾಂಕ್ ವAಚನೆಗೆ ಸಂಬAಧಿಸಿದ ಪ್ರಕರಣದಲ್ಲಿ ಈ ಬೆಳವಣಿಗೆ ನಡೆದಿದೆ. ಮುಂಬೈನ ಪಾಲಿ ಹಿಲ್ ಪ್ರದೇಶದಲ್ಲಿ ನೆಲೆಗೊಂಡಿರುವ ೬೬ ಮೀಟರ್ ಎತ್ತರದ ಐಷಾರಾಮಿ ಆಸ್ತಿಯ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಪಿಎಂಎಲ್ಎ ಅಡಿಯಲ್ಲಿ ತಾತ್ಕಾಲಿಕ ಮುಟ್ಟುಗೋಲು ಆದೇಶ ಹೊರಡಿಸಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಈ ಕ್ರಮದೊಂದಿಗೆ, ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳ ಒಟ್ಟು ಮೌಲ್ಯ ಸುಮಾರು ೧೫,೭೦೦ ಕೋಟಿ ರೂ.ಗಳಿಗೆ ಏರಿದೆ.
೬೬ ವರ್ಷದ ಅನಿಲ್ ಅಂಬಾನಿ ಅವರು ಎರಡನೇ ಸುತ್ತಿನ ವಿಚಾರಣೆಗಾಗಿ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವ ನಿರೀಕ್ಷೆಯಿದೆ. ಆಗಸ್ಟ್ ೨೦೨೫ರಲ್ಲಿ ಪಿಎಂಎಲ್ಎ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿದಾಗ ಮೊದಲು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದರು. ಈ ಹಿಂದೆ ಹಲವಾರು ಬಾರಿ ಅನಿಲ್
ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು. ಅವರು ಕೂಡ ವಿಚಾರಣೆಗೆ ಹಾಜರಾಗಿದ್ದರು. ಅದರ ಬೆನ್ನಲ್ಲೇ ಈಗ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ಶುರು ಮಾಡಿದೆ. ಈ ಪ್ರಕರಣ ಯಾವ ರೀತಿಯ ತಾರ್ಕಿಕ ಅಂತ್ಯ ಕಾಣುತ್ತದೆ ನೋಡಬೇಕು


