Friday, March 13, 2026
Flats for sale
Homeರಾಜಕೀಯನವದೆಹಲಿ : ಕಾಂಗ್ರೆಸ್ ಬಿಟ್ಟು ಮಾತೃ ಪಕ್ಷ ಬಿಜೆಪಿಗೆ ಮರು ಸೇರ್ಪಡೆಯಾದ ಜಗದೀಶ್ ಶೆಟ್ಟರ್.

ನವದೆಹಲಿ : ಕಾಂಗ್ರೆಸ್ ಬಿಟ್ಟು ಮಾತೃ ಪಕ್ಷ ಬಿಜೆಪಿಗೆ ಮರು ಸೇರ್ಪಡೆಯಾದ ಜಗದೀಶ್ ಶೆಟ್ಟರ್.

ನವದೆಹಲಿ : ಬಿಜೆಪಿಯ ಹಿರಿಯ ರಾಜಕಾರಣಿ ಹುಬ್ಬಳ್ಳಿಯ ಮಾಜಿ ಶಾಸಕ ಜಗದೀಶ್ ಶೆಟ್ಟರ್ ರವರು ಇಂದು ತಮ್ಮ ಮಾತೃ ಪಕ್ಷ ಬಿಜೆಪಿ ಗೆ ಮರು ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಿವೈ ವಿಜಯೇಂದ್ರ ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.

ಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

ಪಕ್ಷ ಸೇರ್ಪಡೆ ನಂತರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶೆಟ್ಟರ್, ನಾನು ಪರಿಷತ್​ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್​ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ.ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಅಮಿತ್​ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ ಎಂದರು..

ಕಾಂಗ್ರೆಸ್​ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಧನ್ಯವಾದ ತಿಳಿಸುತ್ತೇನೆ ,ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್​ನವರು ಕೂಡ ಒಳ್ಳೇ ಗೌರವ, ಸ್ಥಾನಮಾನ ನೀಡಿದ್ದರು. ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular