Thursday, August 6, 2026
Homeಗ್ಯಾಜೆಟ್ / ಟೆಕ್ನಾಸಿಕ್ : TCS ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ಪ್ರಕರಣ : ಕಂಪನಿ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ,ವರ್ಕ್...

ನಾಸಿಕ್ : TCS ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ಪ್ರಕರಣ : ಕಂಪನಿ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ,ವರ್ಕ್ ಫ್ರಂ ಹೋಂ ಮಾಡಲು ಸೂಚನೆ.

ನಾಸಿಕ್ : ಮಹಾರಾಷ್ಟçದ ನಾಸಿಕ್‌ನಲ್ಲಿರುವ ಟಿಸಿಎಸ್ ಬಿಪಿಎ ಸಂಸ್ಥೆಯಲ್ಲಿ ಹಿಂದೂ ಮಹಿಳೆಯರಿಗೆ ಲೈಂಗಿಕ ಕಿರುಕುಳ ಮತ್ತು ಬಲವಂತದ ಮತಾಂತರ ಕೇಳಿಬಂದ ಬೆನ್ನಲ್ಲೇ ಕಂಪನಿ ತನ್ನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಉದ್ಯೋಗಿಗಳಿಗೆ ಮುಂದಿನ ಆದೇಶದವರೆಗೂ ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ನಾಸಿಕ್‌ನ ಈ ಬಿಪಿಒ ಸಂಸ್ಥೆಯಲ್ಲಿ ಹಿಂದೂ ಮಹಿಳಾ ಉದ್ಯೋಗಿಗಳ ಮೇಲೆ ದೀರ್ಘಕಾಲದಿಂದ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಮತ್ತು ಧಾರ್ಮಿಕ ಮತಾಂತರ ಮತ್ತು ಬೀಫ್ ತಿನ್ನುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಗಂಭೀರ ದೂರುಗಳು ದಾಖಲಾಗಿವೆ.

ಸುಮಾರು ಒಂಬತ್ತು ಮಹಿಳಾ ಉದ್ಯೋಗಿಗಳು ಮುಂದೆ ಬಂದು ತಮಗಾದ ಅನ್ಯಾಯದ ಬಗ್ಗೆ ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ನಡೆಸುತ್ತಿರುವ ನಾಸಿಕ್ ಪೊಲೀಸರ ಪ್ರಕಾರ, ಆರೋಪಿಗಳು ಕಚೇರಿಯೊಳಗೆ ಒಂದು ಸಂಘಟಿತ ಗ್ಯಾಂಗ್ ನಂತೆ ಕಾರ್ಯನಿರ್ವಹಿಸುತ್ತಿದ್ದರು. ಟೀಮ್ ಲೀಡರ್‌ಗಳ ಹಂತದ ಅಧಿಕಾರಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular