ಪುತ್ತೂರು : ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ.
ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್,ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.
ಕಾರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿತ್ತು. ಇಂದು ನಸುಕಿನ ಜಾವ ೪:೧೫ರ ಸುಮಾರಿಗೆ ಚಾಲಕ ನಿದ್ದೆ ಮಂಪರಿನಲ್ಲಿದ್ದಾಗ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದು ಈ ದುರ್ಘಟನೆ ಸಂಭವಿಸಿದೆ.
ಸುದ್ದಿ ತಿಳಿದ ತಕ್ಷಣವೇ ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ
ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು
ಕೈಗೊಂಡಿದ್ದಾರೆ.


