ಪುತ್ತೂರು : ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಎಂಬವರು, ಮಾರ್ಚ್ 2 ರಂದು ಪುತ್ತೂರಿನಿಂದ ಕೂರ್ನಡ್ಕಕ್ಕೆ ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ, ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ವ್ಯಕ್ತಿ ಅಬ್ದುಲ್ ಹಕೀಂ ಕಡೆಗೆ ಪಿಸ್ತೂಲ್ ನ್ನು ತೋರಿಸಿ ಗುಂಡು ಹೊಡೆಯಲು ಪ್ರಯತ್ನಿಸಿ ಬೆದರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿತ್ತು.
ಈ ವೇಳೆ ಅಬ್ದುಲ್ ಹಕೀಂ ಹಾಗೂ ಇತರರು ಸೇರಿ ಆತನು ಹಿಡಿಯಲು ಹೋದಾಗ ಆತನು ಮೋಟಾರು ಸೈಕಲ್ ನೊಂದಿಗೆ ಓಡಿ ಪರಾರಿಯಾಗಿರುತ್ತಾನೆ ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂಬರ್: 26/2026, ಕಲಂ: 351(3) BNS 2023 ಮತ್ತು ಕಲಂ: 3, 25, 27 ಶಸ್ತ್ರಾಸ್ತ್ರ ಕಾಯ್ದೆ 1959 ಯಡಿ ಪ್ರಕರಣ ದಾಖಲಿಸಿದ್ದು ,ತನಿಖೆ ನಡೆಸಿದ ಪೊಲೀಸರು ನಿವಾಸಿ ಮಹಮ್ಮದ್ ಶಫಿಕ್ (19) ಎಂಬಾತನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


