ಪುತ್ತೂರು : ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಅನಿತಾ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮ್ಯೂರಲ್ ಸಮೀಪದ ಪೊಳ್ಯ ಎಂಬಲ್ಲಿ ನಡೆದಿದೆ.
ಅನಿತಾ ತನ್ನ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ದುರಂತದ ವೇಳೆ ಆಕೆ ಟಿಪ್ಪರ್ನ ಚಕ್ರದಡಿ ಸಿಲುಕಿದ್ದಳು. ಪವಾಡ ಸದೃಶವಾಗಿ ಆಕೆಯ ಮಗು ಯಾವುದೇ ಅಪಾಯವಿಲ್ಲದೆ ಪಾರಾಗಿದೆ.
ಅನಿತಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಪುತ್ತೂರು ನಗರ ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


