ಪುತ್ತೂರು : ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ ಹೊಡೆದ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ದಂಪತಿಗಳಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಮುಂಭಾಗದಿಂದ ಅತೀ ವೇಗದಲ್ಲಿ ಬರುತ್ತಿದ್ದ ಬೈಕ್ ಗೆ ಸೈಡ್ ಕೊಡುವ ಸಂದರ್ಭದಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡವರನ್ನು ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಎಂದು ಗುತಿಸಲಾಗಿದ್ದು ಇನ್ನಿಬ್ಬರು ರೋಹಿಣಿ (32), ಗನ್ಯ (2) ಹಾಗೂ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡ ದಂಪತಿಯನ್ನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಗಾಯಾಳುಗಳು ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಎಂದು ತಿಳಿದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


