ಪುತ್ತೂರು : ಕೌಕ್ರಾಡಿ ಗ್ರಾಮದ ಕಟ್ಟೆ ಮಜಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಉತ್ತರ ಪ್ರದೇಶದ ತಾಯಿ ಮತ್ತು ಮಗು ನಾಪತ್ತೆಯಾಗಿದ್ದಾರೆ. ಯುಪಿ ಮೂಲದ ಸೋನು ಸೋಂಕರ್ ಅವರ ಪತ್ನಿ ರೀಮಾ ಸೋಂಕರ್ (26) ಮತ್ತು ಮಗು ರಿಯಾ (1) ಕಾಣೆಯಾದವರು ಎಂದು ತಿಳಿದುಬಂದಿದೆ.
ಉತ್ತರ ಪ್ರದೇಶದ ಅಜಂಗಢ್ ಜಿಲ್ಲೆಯ ಹಳ್ಳಿಯೊಂದರ ಸೋನು ಸೋಂಕರ್ ಅವರು ಇಂಟೀರಿಯರ್ ಡೆಕೋರೇಟರ್ ಆಗಿ ಕೆಲಸ ಮಾಡುತಿದ್ದು ಕೌಕ್ರಾಡಿಯಲ್ಲಿ ಕೃಷ್ಣಪ್ಪ ಎಂಬುವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಏಪ್ರಿಲ್ 22 ರಂದು ಸೋನು ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರು. ಸಂಜೆ ಹಿಂತಿರುಗಿ ನೋಡಿದಾಗ ಪತ್ನಿ ಹಾಗೂ ಮಗು ಕಾಣೆಯಾಗಿದ್ದಾರೆ . ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


