Friday, November 22, 2024
Flats for sale
Homeಜಿಲ್ಲೆಪುತ್ತೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ.

ಪುತ್ತೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ.

ಪುತ್ತೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ದಕ್ಷಿಣ ಕನ್ನಡ ಜಿಲ್ಲೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರೆಂದು ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ರವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿಯಾಗಿ ಹಲವು ಸುತ್ತಿನ ಮಾತುಕತೆ ನಡೆಸಿದ್ದು ಬಿಜೆಪಿ ಸೇರ್ಪಡೆಯ ಬಗ್ಗೆ ಮಾಹಿತಿ ನೀಡಿದ್ದರು ,ಆದರೆ ಅನೇಕ ಗಡುವು ನೀಡಿದರು ಜಿಲ್ಲೆಯ ಬಿಜೆಪಿ ಮುಖಂಡರು ಯಾವುದೇ ಪ್ರಮುಖ ಉದ್ದೇ ನೀಡದ್ದೇ ಸಾಮಾನ್ಯ ಕಾರ್ಯಕರ್ತನಾಗಿ ಬಿಜೆಪಿ ಸೇರಲು ಸೂಚನೆ ನೀಡಿದ್ದರು. ಈ ಬಗ್ಗೆ ಹಲವು ಬಾರಿ ನಡೆದ ಮಾತುಕತೆ ವಿಫಲ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಕರಾವಳಿಯ ಬಿಜೆಪಿ ಭದ್ರಕೋಟೆಯಲ್ಲಿ ಒಂದಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲಿ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದಿದೆ. ಸ್ವಪಕ್ಷದ ಕಾರ್ಯಕರ್ತರೇ ಟೀಕಿಸುತ್ತಿದ್ದಾರೆ. ಹೀಗಾಗಿ ರಾಜ್ಯ ನಾಯಕರು ಮತ್ತು ಹೈಕಮಾಂಡ್ ಹೊಸ ಅಭ್ಯರ್ಥಿಯ ಹುಡುಕಾಟದಲ್ಲಿರುವಾಗಲೇ ಅರುಣ್ ಕುಮಾರ್ ಪುತ್ತಿಲ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅಧಿಕೃತ ಘೋಷಣೆ ಮಾಡಿದ್ದಾರೆ. ಆ ಮೂಲಕ ಲೋಕಸಭೆ ಚುನಾವಣೆಯಲ್ಲೂ ಪುತ್ತಿಲ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದ್ದು ಈ ಬಾರಿ ಅಭ್ಯರ್ಥಿ ಬದಲಾಯಿಸುವಂತೆ ಬಿಜೆಪಿ ಕಾರ್ಯಕರ್ತರು ಹೈ ಕಮಾಂಡ್ ಗೆ ಮಾನವಿ ಮಾಡಿದ್ದಾರೆ ,ಕೇವಲ ಹಿಂದುತ್ವ ಹಾಗೂ ನರೇಂದ್ರ ಮೋದಿ ಯವರ ಹೆಸರಲ್ಲಿ ಗೆದ್ದು ಬರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿಯ ಚುನಾವಣೆ ಕಷ್ಟ ಕರವಾಗಲಿದೆ. ಈ ಬಾರಿ ಹಲವು ಕಡೆಯಿಂದ ಬಂಡಾಯದ ಬೇಗೆ ಶುರುವಾಗಿದ್ದು ,ಸತ್ಯಜೀತ್ ಸುರತ್ಕಲ್,ಅರುಣ್ ಕುಮಾರ್ ಪುತ್ತಿಲ ಪಕ್ಷೇತರವಾಗಿ ಸ್ಪರ್ಧಿಸಿದರೆ ಯುವ ಮತದಾರರು ಬಿಜೆಪಿ ವಿರುದ್ಧ ಮತ ಚಲಾಯಿಸುವ ಸಂಭವ ಹೆಚ್ಚಾಗಿದ್ದುಈ ಬಾರಿ ಅಭ್ಯರ್ಥಿ ಬದಲಾವಣೆಯಾದರೆ ಉತ್ತಮ ಎಂಬುದು ರಾಜಕೀಯ ವಿಶ್ಲೇಷಕರ ಮಾತು.

RELATED ARTICLES

LEAVE A REPLY

Please enter your comment!
Please enter your name here

Most Popular