Friday, March 6, 2026
Flats for sale
Homeಜಿಲ್ಲೆಪುತ್ತೂರು : ರಾಜ್ಯದಲ್ಲೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಹಕ್ಕುಪತ್ರ ವಿತರಣಾ ಸಮಾರಂಭ : ಪುತ್ತೂರು...

ಪುತ್ತೂರು : ರಾಜ್ಯದಲ್ಲೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಹಕ್ಕುಪತ್ರ ವಿತರಣಾ ಸಮಾರಂಭ : ಪುತ್ತೂರು ಶಾಸಕ ಅಶೋಕ್ ರೈ.

ಪುತ್ತೂರು : ಹೊಸ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಹಕ್ಕುಪತ್ರ ವಿತರಣಾ ಸಮಾರಂಭ ಪುತ್ತೂರಿನಲ್ಲಿ ಆಯೋಜಿಸಲಾಗಿದೆ. ಅಕ್ರಮ ಸಕ್ರಮ ಮತ್ತು ೯೪ಸಿ ಸೇರಿದಂತೆ ಒಟ್ಟು ೪೬೦ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಪುತ್ತೂರು ಶಾಸಕರ ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.

೧೮೭ ಫಲಾನುಭವಿಗಳಿಗೆ ೯೪ಸಿ ಮತ್ತು ೯೪ಸಿಸಿ ಹಕ್ಕುಪತ್ರ ಹಾಗೂ ೨೭೩ ಫಲಾನುಭವಿಗಳಿಗೆ ಅಕ್ರಮ ಸಕ್ರಮ ಹಕ್ಕುಪತ್ರಗಳನ್ನು ಇವತ್ತು ನೀಡಲಾಗುತ್ತಿದೆ. ದಕ್ಷಿಣಕನ್ನಡ, ಉಡುಪಿ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಎಲ್ಲೂ ಇಷ್ಟು ದೊಡ್ಡ ಪ್ರಮಾಣದ ಹಕ್ಕುಪತ್ರ ವಿತರಣೆ ಈ ಬಾರಿ ನಡೆದಿಲ್ಲ ಎಂದು ಹೇಳಿದ ಅವರು, ಇದು ನನ್ನ ಕನಸಿನ ಯೋಜನೆಯಾಗಿದೆ. ಚುನಾವಣೆ ಸಂದರ್ಭದಲ್ಲಿ ನಾನು ಅಕ್ರಮ ಸಕ್ರಮ, ೯೪ಸಿ ಹಕ್ಕುಪತ್ರಗಳನ್ನು ಯಾವುದೇ ಭ್ರಷ್ಟಾಚಾರವಿಲ್ಲದೆ ಬಡವರ ಮನೆ ಬಾಗಿಲಿಗೆ ಮುಟ್ಟಿಸುವುದಾಗಿ ಆಶ್ವಾಸನೆ ನೀಡಿದ್ದೆ. ಅದರಂತೆ ನಡೆದುಕೊಂಡಿದ್ದೇನೆ. ಈ ಮಂಜೂರಾತಿಯಲ್ಲಿ ಒಂದು ಪೈಸೆಯೂ ಲಂಚ ವ್ಯವಹಾರ ನಡೆದಿಲ್ಲ ಎಂದರು.

ವಿಟ್ಲ ಹೋಬಳಿಗೆ ಸಂಬAಧಿಸಿ ೨೬೦ ಕಡತಗಳು ತಯಾರಾಗಿವೆ. ಶೀಘ್ರದಲ್ಲೇ ವಿಟ್ಲದಲ್ಲಿ ಕಾರ್ಯಕ್ರಮ ಏರ್ಪಡಿಸಿ ಅವುಗಳನ್ನು ವಿತರಿಸಲಾಗುವುದು. ಇದಲ್ಲದೆ ಪುತ್ತೂರು ಕ್ಷೇತ್ರದಲ್ಲಿ ಇನ್ನೂ ಸಾವಿರಾರು ಅರ್ಜಿಗಳು ಬಾಕಿ ಇವೆ. ೩ ಗ್ರಾಮಗಳಿಗೊಂದು ಕಾರ್ಯಕ್ರಮ ಮಾಡಿ ಮುಂದಿನ ದಿನಗಳಲ್ಲಿ ವಿತರಿಸಲಾಗುವುದು. ಏಳೆಂಟು ವರ್ಷಗಳಿಂದ ಬಾಕಿ ಇದ್ದ ಅರ್ಜಿಗಳನ್ನು ಕೂಡ ಈ ಬಾರಿ ವಿಲೇವಾರಿ ಮಾಡಲಾಗುತ್ತಿದೆ ಎಂದರು.

ಪುತ್ತೂರಿನ ನೂತನ ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಮಾತನಾಡಿ, ಒರಿಸ್ಸಾ ಮೂಲದ ನಾನು ಬೆಂಗಳೂರಿಗೆ ೧೦ ವರ್ಷಗಳ ಹಿಂದೆ ಬಂದು ಇಲ್ಲೇ ಐಎಎಸ್ ಮಾಡಿ ಕರ್ನಾಟಕವನ್ನೇ ಆರಿಸಿಕೊಂಡಿದ್ದೇನೆ. ಕನ್ನಡಿಗರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಬಡವರಿಗೆ ಅನ್ಯಾಯ ಆಗದಂತೆ ಸೇವೆ ಸಲ್ಲಿಸಲು ಬದ್ಧನಿದ್ದೇನೆ ಎಂದರು.

ಸಭಾ ಕಾರ್ಯಕ್ರಮದಲ್ಲಿ ೪೬೦ ಫಲಾನುಭವಿಗಳಿಗೆ ಶಾಸಕರು ಖುದ್ದಾಗಿ ಹಕ್ಕುಪತ್ರ ವಿತರಿಸಿದರು.

ವೇದಿಕೆಯಲ್ಲಿ ತಹಶೀಲ್ದಾರ್ ಶಿವಶಂಕರ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ರಾಮಣ್ಣ ಪಿಲಿಂಜ, ರೂಪರೇಖಾ ಆಳ್ವಾ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular