ಪುತ್ತೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣ ವಿದ್ಯಾರ್ಥಿನಿ ಖಿನ್ನತೆಗೊಳಗಾಗಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ.
ದ.ಕ. ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ಈ ಘಟನೆ ನಡೆಡಿದ್ದು ,ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ(17) ಎಂದು ತಿಳಿದುಬಂದಿದೆ.
ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದು ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ.
ಮನೆಯವರು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದು ನಂತರ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದಾರೆ.ಕಳೆದ ಒಂದುವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.


