ಪುತ್ತೂರು : ವಿದ್ಯಾರ್ಥಿಯೋರ್ವನ ವಿರುದ್ಧ ಪೋಷಕರು ಗರಂ ಆದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಈ ವಿಚಿತ್ರವಾದ ಪ್ರತಿಭಟನೆಯಲ್ಲಿ ಪೋಷಕರು ವಿದ್ಯಾರ್ಥಿಯನ್ನು ಶಾಲೆಯಿಂದ ಹೊರ ಹಾಕುವಂತೆ ಒತ್ತಾಯಿಸಿದ್ದಾರೆ. ಪುತ್ತೂರಿನ ಮೇನಾಲ ಎಂಬಲ್ಲಿ 6 ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಕುಡಿದು ಶಾಲೆಗೆ ಬರುತ್ತಾನೆ ಎಂದು ಆರೋಪಿಸಿ ಪೋಷಕರಿಂದ ವಿಚಿತ್ರ ಪ್ರತಿಭಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮೇನಾಲ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ .ವಿದ್ಯಾರ್ಥಿ ವಿರುದ್ಧ ಪ್ರತಿಭಟಿಸಿದ ಪೋಷಕರು ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೋಷಕರ ಜೊತೆ ಚರ್ಚೆ ನಡೆಸಿದ್ದಾರೆ.


