ಪೇಶಾವರ : ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿರುವ ಸುಮಾರು 200 ವರ್ಷಗಳಷ್ಟು ಹಳೆಯ ರಾಮಲೀಲಾ ಹಿಂದೂ ದೇಗುಲವನ್ನು ಜಿಲ್ಲಾಡಳಿತ ಬಂದ್ ಮಾಡಿದೆ.
ಇತ್ತೀಚೆಗೆ ಕೆಲವರು ದೇಗುಲವನ್ನು ಕೆಡವಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಳೀಯ ಹಿಂದೂ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದ್ದರು. ದೇಗುಲದ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು.
ಈ ಬೆಳವಣಿಗೆಯ ಬೆನ್ನಲ್ಲೇ ಜಿಲ್ಲಾಡಳಿತ ದೇಗುಲವನ್ನು ಮುಚ್ಚಿ, ಅದರ ಸಂಪೂರ್ಣ ಆವರಣವನ್ನು ತನ್ನ ಸುಪರ್ದಿಗೆ ಪಡೆದುಕೊಂಡಿದೆ ಎಂದು ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ETPB) ತಿಳಿಸಿದೆ.
ಸುಮಾರು ಎರಡು ಶತಮಾನಗಳ ಇತಿಹಾಸ ಹೊಂದಿರುವ ಈ ದೇಗುಲದ ಸುರಕ್ಷತೆ ಹಾಗೂ ಮುಂದಿನ ಕ್ರಮಗಳ ಕುರಿತು ಸ್ಥಳೀಯ ಹಿಂದೂ ಸಮುದಾಯದಲ್ಲಿ ಕಳವಳ ವ್ಯಕ್ತವಾಗಿದೆ.

