Friday, March 13, 2026
Flats for sale
Homeಜಿಲ್ಲೆಬಂಟ್ವಾಳ : ಪಕ್ಷದ ನಾಯಕರ ಬಗ್ಗೆ ಅಸಮಾಧಾನ : ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮಂಗಳೂರು...

ಬಂಟ್ವಾಳ : ಪಕ್ಷದ ನಾಯಕರ ಬಗ್ಗೆ ಅಸಮಾಧಾನ : ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್.

ಬಂಟ್ವಾಳ : ಅನೇಖ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನೀಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ಇದೀಗ ಬಿಜೆಪಿ ಫ್ಲ್ಯಾಗ್ ಹಿಡಿದು ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular