Thursday, July 23, 2026
Homeಜಿಲ್ಲೆಬಂಟ್ವಾಳ : ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು.

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು.

ಬಂಟ್ವಾಳ : ತನ್ನ ಸಹೋದರ ಹಾಗೂ ಸ್ನೇಹಿತರೊಂದಿಗೆ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನರಿಕೊಂಬು ಗ್ರಾಮದ ಪೊಯಿತ್ತಾಜೆ ಎಂಬಲ್ಲಿ ಭಾನುವಾರ ನಡೆದಿದೆ.

ನರಿಕೊಂಬು ಗ್ರಾಮದ ಬಿಕ್ರೋಡಿ ನಿವಾಸಿ ಯೋಗೀಶ್ ಪೂಜಾರಿ ಎಂಬವರ ಪುತ್ರ ಅನುಷ್ (20) ಮೃತರು. ಅನುಷ್ ಮೂಡುಬಿದಿರೆಯ ಖಾಸಗಿ ಕಾಲೇಜಿನಲ್ಲಿ ಉದ್ಯೋಗಿಯಾಗಿದ್ದರು. ರಜೆಯ ಪ್ರಯುಕ್ತ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ತನ್ನ ಕಿರಿಯ ಸಹೋದರ ರೂಪೇಶ್ ಹಾಗೂ ಸ್ನೇಹಿತರಾದ ಅನೀಶ್ ಹಾಗೂ ಕಿಶನ್ ಅವರೊಂದಿಗೆ ಈಜಲು ತೆರಳಿದ್ದರು.ದುರದೃಷ್ಟವಶಾತ್, ಅನುಷ್ ಈಜುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನಲ್ಲಿ ಮುಳುಗಿದ್ದರಿಂದ ದುರಂತ ಸಂಭವಿಸಿದೆ. ಆತನ ಸಹೋದರ ಮತ್ತು ಸ್ನೇಹಿತರು ಎಷ್ಟು ಪ್ರಯತ್ನಪಟ್ಟರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.

ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಅನುಷ್ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular