ಬಂಟ್ವಾಳ : ಪಾಣೆಮಂಗಳೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಸೇತುವೆಯ ಬಳಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಲಾರಿಗೆ ದ್ವಿಚಕ್ರವಾಹನ ಸವಾರನೊಬ್ಬ ಡಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿದ ದಾರುಣ ಘಟನೆ ಸೆಪ್ಟೆಂಬರ್ 24, 2023ರ ಭಾನುವಾರ ಬೆಳಗ್ಗೆ ಸಂಭವಿಸಿದೆ. ಮೃತರು ಸಜೀಪ ಬೆಂಕಿಯ ನಿವಾಸಿ ವಾಸುದೇವ ಮೈಯ್ಯ ಅವರ ಪುತ್ರ ರಾಜ್ ಕುಮಾರ್ ಎಂದು ಗುರುತಿಸಲಾಗಿದೆ.ರಾಜ್ ಕುಮಾರ್ ವಾಮದಪದವುನಿಂದ ಸಜೀಪ ಮನೆಗೆ ಹಿಂದಿರುಗುತ್ತಿದ್ದಾಗ ಈ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಬೈಕ್ ಗೆ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದ ಪವಿತ್ರಾ ಕನ್ಸ್ಟ್ರಕ್ಷನ್ಗೆ ಸೇರಿದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ರಾಜ್ ಕುಮಾರ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅವರ ಗಾಯಗಳ ತೀವ್ರತೆಯಿಂದ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮದ್ಯೆ ಅವರು ಸಾವನ್ನಪ್ಪಿದ್ದಾರೆ ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಮೆಲ್ಕಾರ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


