Tuesday, July 21, 2026
Homeಜಿಲ್ಲೆಬಂಟ್ವಾಳ : ಬಿ.ಸಿ. ರೋಡ್ ನಾರಾಯಣ ಗುರು ವೃತ್ತಕ್ಕೆ ಕಾರು ಡಿಕ್ಕಿ, ಮೂರು ಜನ ಸಾವು,...

ಬಂಟ್ವಾಳ : ಬಿ.ಸಿ. ರೋಡ್ ನಾರಾಯಣ ಗುರು ವೃತ್ತಕ್ಕೆ ಕಾರು ಡಿಕ್ಕಿ, ಮೂರು ಜನ ಸಾವು, ಆರು ಮಂದಿಗೆ ಗಂಭೀರ ಗಾಯ.

ಮಂಗಳೂರು : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಬೆಂಗಳೂರಿನ ನಿವಾಸಿಗಳಾದ ರವಿ (64), ನಂಜಮ್ಮ (75) ಮತ್ತು ರಮ್ಯಾ (23) ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಮತ್ತು ಚಾಲಕ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ. ಎಲ್ಲರ ಸ್ಥಿತಿ ಗಂಭೀರವಾಗಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು (ನೋಂದಣಿ ಸಂಖ್ಯೆ KA 02 AE 6146) ಬೆಳಿಗ್ಗೆ 5 ಗಂಟೆ ಸುಮಾರಿಗೆ ನಿಯಂತ್ರಣ ತಪ್ಪಿ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಒಟ್ಟು ಒಂಬತ್ತು ಸಂಬಂಧಿಕರು ಪ್ರಯಾಣಿಸುತ್ತಿದ್ದರು.

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular