Sunday, August 16, 2026
Homeರಾಜ್ಯಬಳ್ಳಾರಿ : ಬಳ್ಳಾರಿ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಭೀಕರ ಅಪಘಾತದ ರಭಸಕ್ಕೆ ಎರಡು ಲಾರಿಗಳಿಗೆ ಬೆಂಕಿ,...

ಬಳ್ಳಾರಿ : ಬಳ್ಳಾರಿ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಭೀಕರ ಅಪಘಾತದ ರಭಸಕ್ಕೆ ಎರಡು ಲಾರಿಗಳಿಗೆ ಬೆಂಕಿ, ಚಾಲಕ ಸಜೀವ ದಹನ.

ಬಳ್ಳಾರಿ : ಬಳ್ಳಾರಿ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 150ಎಯ ಜಾಜರಕಲ್ ಟೋಲ್ ಪ್ಲಾಜಾ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಎರಡು ಲಾರಿಗಳು ಬೆಂಕಿಗಾಹುತಿಯಾಗಿದ್ದು, ಓರ್ವ ಚಾಲಕ ಸಜೀವ ದಹನಗೊಂಡಿರುವ ದುರ್ಘಟನೆ ನಡೆದಿದೆ.

ಬಳ್ಳಾರಿ ಜಿಲ್ಲೆ ಗಡಿಭಾಗದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿ. ಹಿರೇಹಾಳ ಮಂಡಳ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್‌ವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ, ರಾಂಪುರಂ ಕಡೆಯಿಂದ ಬಂದ ಮತ್ತೊಂದು ಲಾರಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಜ್ವಾಲೆಗಳು ವ್ಯಾಪಿಸಿವೆ. ಅಪಘಾತದ ವೇಳೆ ಲಾರಿಯ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ ಚಾಲಕ ದೀಕ್ಷಿತ್ ಹೊರಬರಲು ಸಾಧ್ಯವಾಗದೆ ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕರ್ನಾಟಕ ಹಾಗೂ ಆಂಧ್ರಪ್ರದೇಶ ರಾಜ್ಯಗಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಅಪಘಾತ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular