ಬಳ್ಳಾರಿ : ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಗಲಾಟೆಯಲ್ಲಿ ಮೃತಪಟ್ಟ ರಾಜಶೇಖರ ಮನೆಗೆ ಡಿಸಿಎಂ ಡಿಕೆಶಿ ಭೇಟಿ ನೀಡಿದ್ದಾರೆ.
ಮೃತ ರಾಜಶೇಖರ ಕುಟುಂಬದವರನ್ನು ಭೇಟಿಯಾಗಿ ಡಿಕೆ ಶಿವಕುಮಾರ್ ಸಾಂತ್ವನ ಹೇಳಿದ್ದು ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ.
ಘಟನೆ ನಡೆದ ಹಿನ್ನೆಲೆ ಮತ್ತು ಕಾರಣಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು ,ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಸರ್ಕಾರದಿಂದ ಕುಟುಂಬಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದು ಕಾನೂನು ಮೂಲಕ ನ್ಯಾಯ ಸಿಗುವಂತೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.
ಡಿಕೆ ಮುಂದೆ ಮೃತ ರಾಜಶೇಖರ ಕುಟುಂಬದ ಪರಿಸ್ಥಿತಿ ತಿಳಿಸಿ ತಾಯಿ ತುಳಸಿ ಕಣ್ಣೀರು ಹಾಕಿದ್ದಾರೆ. ಇಡೀ ಮನೆಗೆ ರಾಜಶೇಖರ್ ಆಧಾರವಾಗಿದ್ದ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.


