Friday, March 13, 2026
Flats for sale
Homeರಾಜಕೀಯಬೆಂಗಳೂರು ; 40 ತಾಸುಗಳ ಸುಧೀರ್ಘ ವಿಚಾರಣೆಯ ಬಳಿಕ ಮಾಜಿ ಸಚಿವ ನಾಗೇಂದ್ರ ನನ್ನು...

ಬೆಂಗಳೂರು ; 40 ತಾಸುಗಳ ಸುಧೀರ್ಘ ವಿಚಾರಣೆಯ ಬಳಿಕ ಮಾಜಿ ಸಚಿವ ನಾಗೇಂದ್ರ ನನ್ನು ವಶಕ್ಕೆ ಪಡೆದ ಇಡಿ.!

ಬೆಂಗಳೂರು ; ಸಿದ್ದರಾಮಯ್ಯ ಸರಕಾರದಲ್ಲಿ ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ತಲೆದಂಡವಾಗಿದ್ದು ಇದೀಗ ಇಡಿ ಮಹತ್ವದ ಸಾಕ್ಷಿ ಗಳನ್ನು ಸಂಗ್ರಹಿಸಿದೆ.

ಹಗರಣದ ತನಿಖೆ ನಡೆಸುತ್ತಿರುವ ಎಸ್​ಐಟಿ, ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಾಗೇಂದ್ರ ವಿರುದ್ಧ ಸಾಕಷ್ಟು ಸಾಕ್ಷ್ಯ ಕಲೆ ಹಾಕಿದ್ದಾರೆ. ಈ ಪೈಕಿ ಅನೇಕ ಸಂಗತಿಗಳು ಹಗರಣದಲ್ಲಿ ನಾಗೇಂದ್ರ ಪಾತ್ರ ಇದೆ ಎಂಬುದನ್ನು ಪುಷ್ಟೀಕರಿಸಿವೆ.

ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಸಭೆಯೇ ನಾಗೇಂದ್ರ ವಿರುದ್ಧದ ಮೊದಲ ಹಾಗೂ ಪ್ರಮುಖ ಸಾಕ್ಷಿ ಎನ್ನಲಾಗಿದೆ.ಈ ಸಾಕ್ಷ್ಯಗಳ ಆಧಾರದಲ್ಲೇ ಇ.ಡಿ ಮೂರು ಬಾರಿ ನಾಗೇಂದ್ರಗೆ ವಿಚಾರಣೆಗೆ ಬುಲಾವ್ ನೀಡಿತ್ತು ಮತ್ತು ಈಗ ವಶಕ್ಕೆ ಪಡೆಡುಕೊಂಡಿದೆ. ಈ ಮಧ್ಯೆ, ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular