Saturday, March 14, 2026
Flats for sale
Homeರಾಜ್ಯಬೆಂಗಳೂರು : 5 ರಿಂದ 8,9,11 ನೇ ತರಗತಿಗಳ ಬೋರ್ಡ್ ಎಕ್ಸಾಂ ರದ್ದು ಮಾಡಿದ ಹೈಕೋರ್ಟ್.

ಬೆಂಗಳೂರು : 5 ರಿಂದ 8,9,11 ನೇ ತರಗತಿಗಳ ಬೋರ್ಡ್ ಎಕ್ಸಾಂ ರದ್ದು ಮಾಡಿದ ಹೈಕೋರ್ಟ್.

ಬೆಂಗಳೂರು : ಕರ್ನಾಟಕದಲ್ಲಿ 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ರುಪ್ಸಾ ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು.ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು.

ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಮ್‌ ನಡೆಸುವ ಚಿಂತನೆ ಮಾಡಲಾಗಿತ್ತು.ಬಿಜೆಪಿ ಸರ್ಕಾರವಿದ್ದಾಗ ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ 5 ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು.

ಈದೀಗ ಹೈಕೋರ್ಟ್ ಏಕಸದಸ್ಯ ಪೀಠ ರದ್ದು ಮಾಡಿ ಆದೇಶ ಹೊರಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular