ಬೆಂಗಳೂರು : ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಅತಿ ಸುರಕ್ಷತಾ ನೋಂದಣಿ ಫಲಕಗಳ ಯೋಜನೆಯನ್ನು ಭದ್ರತೆಯ ದೃಷ್ಟಿಯಿಂದ ಕಡ್ಡಾಯವಾಗಿ ಹೈಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ವಾಹನಗಳನ್ನು ಬಳಸಿಕೊಂಡು ಎಸಗುವ ಅಪರಾಧಗಳನ್ನು ತಡೆಗಟ್ಟುವುದು ಮತ್ತು ರಸ್ತೆಯ ಮೇಲೆ ಸಂಚರಿಸುವ ಎಲ್ಲಾ ವಾಹನಗಳನ್ನು ಗುರುತಿಸಲು ಸಾಧ್ಯವಾಗುತ್ತದೆ. ಅಲ್ಲದೆ, ನೋಂದಣಿ ಫಲಕಗಳನ್ನು ವಿರೂಪಗೊಳಿಸುವ ಮತ್ತು ನಕಲಿ ನೋಂದಣಿ ಫಲಕಗಳನ್ನು ನಿಯಂತ್ರಿಸಲು ಸಹಾಯಕವಾಗುತ್ತದೆ. ಪ್ರವರ್ತನ ಮತ್ತು ಭದ್ರತೆ ದೃಷ್ಟಿಯಿಂದ ಅತಿ ಸುರಕ್ಷಿತ ನೋಂದಣಿ ಫಲಕಗಳು ಪ್ರಮುಖ ಪಾತ್ರ ವಹಿಸುತ್ತವೆ.
ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ತಪ್ಪಿದೆ. ವಾದಗಳನ್ನು ಪರಿಶೀಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಎಚ್ಎಸ್ಆರ್ಪಿ ಸ್ಥಾಪನೆಯ ಗಡುವನ್ನು ಮೊದಲು ಕರ್ನಾಟಕ ಸರ್ಕಾರವು ಫೆಬ್ರವರಿ 17 ರಿಂದ ಮೇ 31, 2024 ರವರೆಗೆ ವಿಸ್ತರಿಸಿತು ಮತ್ತು ನಂತರ ಅದನ್ನು ಮತ್ತೆ ಸೆಪ್ಟೆಂಬರ್ 15.3 ಗಂಟೆಗೆ ವಿಸ್ತರಿಸಲಾಗಿದೆ.


