ಬೆಂಗಳೂರು : ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ Karnataka Examinations Authority ಈ ಬಾರಿ ಕಠಿಣ ಡ್ರೆಸ್ ಕೋಡ್ ಹಾಗೂ ಹಲವು ನಿಯಮಗಳನ್ನು ಜಾರಿಗೆ ತಂದಿದೆ. ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲ ನಿವಾರಣೆ ಮತ್ತು ಪಾರದರ್ಶಕತೆ ಕಾಪಾಡಲು ವಿಶೇಷ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ.
ಡ್ರೆಸ್ ಕೋಡ್ ಅಧಿಕಾರಿಗಳ ನೇಮಕ:
ಪರೀಕ್ಷಾ ಇತಿಹಾಸದಲ್ಲೇ ಮೊದಲ ಬಾರಿಗೆ, ಪ್ರತಿ ಕೇಂದ್ರಕ್ಕೂ ಒಬ್ಬರಂತೆ ಒಟ್ಟು 745 ಡ್ರೆಸ್ ಕೋಡ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಇವರು ಅಭ್ಯರ್ಥಿಗಳ ಉಡುಪು ಹಾಗೂ ನಿಯಮ ಪಾಲನೆ ಮೇಲ್ವಿಚಾರಣೆ ನಡೆಸಲಿದ್ದಾರೆ.
ಉಡುಪಿನ ನಿಯಮ:
ಅಭ್ಯರ್ಥಿಗಳು ಅರ್ಧ ತೋಳಿನ (ಹಾಫ್ ಸ್ಲೀವ್ಸ್) ಉಡುಪು ಧರಿಸುವುದು ಕಡ್ಡಾಯವಾಗಿದೆ. ಕಾಲರ್ ಇಲ್ಲದ ಸರಳ ಉಡುಪುಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಲಾಗಿದೆ.
ಹುಡುಗರಿಗೆ ನಿರ್ಬಂಧ:
ಕುರ್ತಾ-ಪೈಜಾಮ, ಜೀನ್ಸ್ ಪ್ಯಾಂಟ್ ಹಾಗೂ ಶೂ ಧರಿಸುವುದನ್ನು ನಿಷೇಧಿಸಲಾಗಿದೆ. ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಲು ಸೂಚನೆ ನೀಡಲಾಗಿದೆ.
ನಿಷೇಧಿತ ವಸ್ತುಗಳು:
ಮೊಬೈಲ್ ಫೋನ್, ಬ್ಲೂಟೂತ್ ಸಾಧನಗಳು, ಇಯರ್‌ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೊಠಡಿಗೆ ಕೊಂಡೊಯ್ಯಲು ಅನುಮತಿ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


