ಬೆಂಗಳೂರು : 2024 ರ ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ಎಸ್ಎಸ್ಎಲ್ಸಿ ಫಲಿತಾಂಶವನ್ನು ನಾಳೆ ಬೆಳಗ್ಗೆ 10.30 ಗಂಟೆಗೆ ಪ್ರಕಟಿಸಲಿದೆ.
ರಾಜ್ಯಾದ್ಯಂತ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೆಎಸ್ಇಎಬಿ 10 ನೇ ತರಗತಿ ಫಲಿತಾಂಶಗಳನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ನಲ್ಲಿ karresults.nic.in ನಲ್ಲಿ ಪರಿಶೀಲಿಸಬಹುದು.
ನೇರ ಲಿಂಕ್ ಅನ್ನು kseab.karnataka.gov.in ನಲ್ಲಿ ಪರಿಶೀಲಿಸಬಹುದು.ರಾಜ್ಯಾದ್ಯಂತ ಸುಮಾರು ಎಸ್ಎಸ್ಎಲ್ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು ನೋಂದಾಯಿಸಿಕೊಂಡಿದ್ದರು. ಒಟ್ಟಾರೆ 8 ಲಕ್ಷ ಅಭ್ಯರ್ಥಿಗಳು ಕರ್ನಾಟಕ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದರು.
ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ತಿಳಿಸಲಾಗಿದೆ.
ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
ಈ ರೀತಿ ರಿಸಲ್ಟ್ ಚೆಕ್ ಮಾಡಿ
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಕೂಡ ಪ್ರಕಟವಾಗಲಿದೆ. ಜತೆಗೆ ಆಯಾ ಶಾಲೆಗಳಲ್ಲಿಯೂ ಪ್ರಕಟಿಸಲಾಗುತ್ತದೆ.
ಫಲಿತಾಂಶ ವಿವರ ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಲಭ್ಯ.
ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
ಹೊಸ ಲಾಗಿನ್ ಪುಟವು ತೆರೆಯುತ್ತದೆ
ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್ಲೋಡ್ ಮಾಡಿ ವೀಕ್ಷಿಸಬಹುದು.


