ಬೆಂಗಳೂರು : ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಜಾಮೀನನಲ್ಲಿ ಮೇಲೆ ಜೈಲಿನಿಂದ ಬಿಡುಗಡೆಯಾದರು. ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಹನ್ನೊಂದು ದಿನಗಳ ಹಿಂದೆ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲೇ ಬಂಧಿತರಾಗಿದ್ದ ಎಚ್.ಡಿ ರೇವಣ್ಣ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಜೈಲರ್‌ಗೆ ಬಿಡುಗಡೆ ಆದೇಶ ಪ್ರತಿ ದೊರೆತ ಬಳಿಕ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಗಿದೆ. ರೇವಣ್ಣ ಬಿಡುಗಡೆ ಬಳಿಕ ನೇರವಾಗಿ ಪದ್ಮನಾಭ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ರೇವಣ್ಣ ಬಿಡುಗಡೆಯಿಂದ ಗೌಡರ ಕುಟುಂಬದಲ್ಲಿ ಸಂತೋಷ ಮೂಡಿದ್ದು, ಬಿಡುಗಡೆ ಬಳಿಕ ತಂದೆ ದೇವೇಗೌಡರು, ಹೆಚ್‌ಡಿಕೆ ಸೇರಿ ಕುಟುಂಬ ಸದಸ್ಯರ ಜೊತೆಗೆ ರೇವಣ್ಣ ಚರ್ಚೆ ನಡೆಸುವ ಸಾಧ್ಯತೆ ಇದೆ. ಮಾಜಿ ಪಿಎಂ ಎಚ್.ಡಿ ದೇವೇಗೌಡರ ಆಶೀರ್ವಾದ ಪಡೆದು ಬಳಿಕ ಮುಂದಿನ ಕೆಲಸಗಳಿಗಾಗಿ ಹಾಸನ ಕಡೆ ಹೊರಡಲಿದ್ದಾರೆ.
ಹನ್ನೊಂದು ದಿನಗಳ ಸಂಕಷ್ಟದ ಮೂಡ್‌ನಿAದ ಇಂದು ಹೊರಬಂದಿರುವ ದೇವೇಗೌಡರು, ನಿನ್ನೆ ರಾತ್ರಿ ಒಂದು ಗಂಟೆವರೆಗೂ ತಮ್ಮ ಮಕ್ಕಳೊಂದಿಗೆ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ.
ಮಾಜಿ ಸಿಎಂ ಎಚ್‌ಡಿಕೆ ಸೇರಿದಂತೆ ದೇವೇಗೌಡರ ಪುತ್ರಿಯರು ಸಹ ಇದರಲ್ಲಿ ಭಾಗಿಯಾಗಿದ್ದರು. ಇಂದು ಮನೆಯಲ್ಲಿ ಹಬ್ಬದ ವಾತಾವರಣವಿದ್ದು, ನಿನ್ನೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.
ಪೆನ್ ಡ್ರೈವ್ ಪ್ರಕರಣದಿಂದ ಈಗಾಗಲೇ ನಮ್ಮ ಕುಟುಂಬದ ಮಾನ ಬೀದಿಗೆ ಬಂದಿದೆ. ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಇಕ್ಕಟ್ಟಿಗೆ ಸಿಲುಕಿದ್ದೇವೆ. ಈ ಹೊತ್ತಲ್ಲಿ ರಾಜಕೀಯ ಹೇಳಿಕೆ ಸೇರಿದಂತೆ ಯಾವುದಕ್ಕೂ ಹೇಳಿಕೆ ನೀಡಬೇಡಿ. ಹೆಚ್ಚು ಮಾತನಾಡಬೇಡಿ’’ ಎಂದು ದೇವೇಗೌಡರು ಮಕ್ಕಳಿಗೆ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡುವಂತೆ ಎಚ್ಚರಿಸಿದ್ದಾರೆ.
ರಾಜಕೀಯ ಷಡ್ಯಂತ್ರದ ಬಗ್ಗೆ ಚರ್ಚೆ?
ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ನಿಷ್ಪಕ್ಷಪಾತ ತನಿಖೆಯನ್ನು ನಡೆಸಲಾಗುತ್ತಿಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್ ಮಧ್ಯಪ್ರವೇಶ ಮಾಡಿದ್ದಾರೆ. ರಾಜಕೀಯವಾಗಿ ಏನೆಲ್ಲ ಷಡ್ಯಂತ್ರ ನಡೆಯುತ್ತಿದೆ ಎಂಬ ಬಗ್ಗೆ ಈಗಾಗಲೇ ಆರೋಪ ಮಾಡಿರುವ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯವನ್ನು ರೇವಣ್ಣ ಮುಂದೆ ಪ್ರಸ್ತಾಪ ಮಾಡಿದ್ದಾರೆನ್ನಲಾಗಿದೆ. ಅಲ್ಲದೆ, ರಾಜಕೀಯ ಷಡ್ಯಂತ್ರದ ಜತೆಗೆ ಮುಂದಿನ ನಡೆ ಏನು ಎಂಬ ಬಗ್ಗೆಯೂ ತಂದೆ ಮತ್ತು ಮಕ್ಕಳು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.