ಬೆಂಗಳೂರು ; ಮಂಚದ ಮೇಲೆ ಮಲಗಿದ್ದ ಆಂಟಿಯನ್ನು ಕತ್ತು ಹಿಸುಕಿ ಕೊಂದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ನಲ್ಲಿ ನಡೆದಿದೆ. ಬರ್ಬರ ಹತ್ಯೆ ಮಾಡಿ ನಗ್ನವಾಗಿ ಬಿದ್ದಿದ್ದ ಮಹಿಳೆಯನ್ನು ಶೋಭಾ (48) ಎಂದು ಗುರುತಿಸಲಾಗಿದೆ.ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿರುವ ಕೊಡಿಗೇಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಳೆದ ಏಪ್ರಿಲ್ 19ರಂದು ಕೊಡಿಗೇಹಳ್ಳಿ ಮನೆಯಲ್ಲಿ ಶೋಭಾ ಎಂಬ ಮಹಿಳೆಯ ಮೃತದೇಹ ನಗ್ನವಾಗಿ ಪತ್ತೆಯಾಗಿತ್ತು. 48 ವರ್ಷದ ಮಹಿಳೆ ಶೋಭಾ ಈ ಮನೆಯಲ್ಲಿ ಒಬ್ಬರೇ ವಾಸವಿದ್ದರು. ಶೋಭಾ ಒಂದು ಕಾರು ಡ್ರೈವಿಂಗ್ ಸ್ಕೂಲ್ ನಡೆಸುತ್ತಾ ಇದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಏಪ್ರಿಲ್ 19ರಂದು ಮಗಳು ಎಷ್ಟು ಬಾರಿ ಫೋನ್ ಮಾಡಿದರೂ ಶೋಭಾ ಅವರು ಕರೆ ಸ್ವೀಕರಿಸಿರಲಿಲ್ಲ. ಅನುಮಾನಗೊಂಡ ಮಗಳು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.
48ರ ಶೋಭಾಳಿಗೆ ಯುವಕರೆಂದರೆ ಹುಚ್ಚು ಜಾಸ್ತಿ ಅಂತೆ. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿರುವ ಶೋಭಾ, ನವೀನ್ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು.ಇನ್ನೂ ಕೊಲೆಯಾದ ದಿನವೂ ನವೀನ್ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನೀನು ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್, ಶೋಭಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.
ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿಪ್ರಸಾದ್ ಅವರು ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಆರೋಪಿ ನವೀನ್ ಗೌಡ ಬೆಂಗಳೂರಿನ ಬನಶಂಕರಿ ನಿವಾಸಿಯಾಗಿದ್ದ. ಇನ್ಸ್ಟಾಗ್ರಾಂನಲ್ಲಿ ಇವರಿಬ್ಬರ ಮಧ್ಯೆ ಪರಿಚಯವಾಗಿ ಸ್ನೇಹ ಬೆಳೆದಿತ್ತು. ಮಹಿಳೆಯನ್ನು ಕೊಲೆ ಮಾಡಿದ ಆರೋಪಿ ಆಕೆಯ ಎಟಿಎಂ ಕಾರ್ಡ್, ಫೋನ್ ಕೂಡ ತೆಗೆದುಕೊಂಡು ಹೋಗಿದ್ದ. ಎಟಿಎಂನಿಂದ ಮೊದಲ ದಿನ 1 ಲಕ್ಷ, ಮೂರನೇ ದಿನ 80 ಸಾವಿರ ರೂಪಾಯಿ ವಿಥ್ ಡ್ರಾ ಮಾಡಿಕೊಂಡಿದ್ದ. ಶೋಭಾ ಅವರ ಅಕೌಂಟ್ನಿಂದ 1 ಲಕ್ಷ 80 ಸಾವಿರ ರೂಪಾಯಿ ಹಣ ವಿಥ್ ಡ್ರಾ ಮಾಡಿಕೊಂಡ ಮೇಲೆ ಪೊಲೀಸರಿಗೆ ಹಂತಕನ ಸುಳಿವು ಸಿಕ್ಕಿದೆ. ಬ್ಯಾಂಕ್ನಿಂದ ಸಿಕ್ಕ ಮಾಹಿತಿ ಆಧಾರದ ಮೇಲೆ ಆರೋಪಿ ನವೀನ್ ಗೌಡ ಎಂಬುವನನ್ನು ಬಂಧಿಸಲಾಗಿದೆ.