ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದು ಮಾಡಲು ದೇಶದ ಸರ್ವೋಚ್ಛ ನ್ಯಾಯಲಯ ನಿರಾಕರಿಸಿದೆ.
ಕೇಂದ್ರಿಯ ತನಿಖಾ ದಳ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ನಿರಾಕರಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿರುವ ಈ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಹಿಂದೆ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದಾಗ 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿ ಪ್ರಕರಣ ದಾಖಲಿಸಿತ್ತು. 2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ವಿರುದ್ಧ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು.