ಬೆಂಗಳೂರು: 2016 ರಲ್ಲಿ ನಡೆದಿದ್ದ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಎಫ್ಐ ಸಂಘಟನೆ ಮುಖಂಡ ಮೊಹಮ್ಮದ್ ಗೌಸ್ ನಯಾಜಿಯನ್ನು 8 ವರ್ಷದ ನಂತರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ.
ದಕ್ಷಿಣ ಆಫ್ರಿಕಾದ ತಾಂಜೇನಿಯಾದಲ್ಲಿ ತಲೆಮರೆಸಿಕೊAಡಿದ್ದ ಗೌಸ್ ಮುಂಬೈಗೆ ಬರುವ ಬಗ್ಗೆ ಖಚಿತ ಮಾಹಿತಿ ಪಡೆದ ಎನ್ಐಎ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ. 2016 ಅ.16 ರಂದು ಬೆಳಗ್ಗೆ 9 ಕ್ಕೆ ಶಿವಾಜಿನಗರದ ಕಾಮರಾಜ್ ರಸ್ತೆಯ ಶ್ರೀನಿವಾಸ್ ಮೆಡಿಕಲ್ ಸ್ಟೋರ್ ಮುಂಭಾಗ ಸ್ನೇಹಿತರೊಂದಿಗೆ ನಿAತಿದ್ದ ರುದ್ರೇಶ್ನನ್ನು 2 ಬೈಕ್ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತçಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.
ಆರ್ಎಸ್ಎಸ್ ಸದಸ್ಯರು ಮತ್ತು ಸಮಾಜದಲ್ಲಿ ಭಯೋತ್ಪಾದನೆ ಭೀತಿಯನ್ನು ಉಂಟುಮಾಡುವ ಉದ್ದೇಶದಿಂದ ರುದ್ರೇಶ್ನನ್ನು ಕೊಲ್ಲಲು ಘೌಸ್ ಮತ್ತು ಶೆರೀಫ್ ಇತರ ನಾಲ್ವರು ಆರೋಪಿಗಳನ್ನು ಪ್ರೇರೇಪಿಸಿದ್ದರು. ಆರ್ಎಸ್ಎಸ್ ವಿರುದ್ಧದ ಹೋರಾಟವನ್ನು ‘ಪವಿತ್ರ ಯುದ್ಧ’ ಎಂದು ನಂಬುವಂತೆ ಕೊಲೆಗಾರರನ್ನು ಮನವೊಲಿಸಲಾಗಿತ್ತು ಎಂದು ಎನ್ಐಎ ತಿಳಿಸಿದೆ.
ಘೌಸ್ ಬಂಧನದೊಂದಿಗೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ.


