ಬೆಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಆಡಳಿತ ಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಕಿತ್ತಾಟಕ್ಕೆ ವೇದಿಕೆ ಕಲ್ಪಿಸಿದಂತಿದೆ. ಎರಡೂ ಪಕ್ಷಗಳು ಪರಸ್ಪರ ವಾಗ್ದಾಳಿಗಳನ್ನು ಮುಂದುವರೆಸಿವೆ. ಕಾಂಗ್ರೆಸ್ಸಿಗರಿಗೆ ಭಯೋತ್ಪದರೆಂದರೆ ಏನೋ ಒಂದು ಪ್ರೀತಿ , ಕಾಂಗ್ರೆಸ್ ಭಯೋತ್ಪಾದಕರ ಪರವೋ, ದೇಶಭಕ್ತರ ಪರವೋ ಎನ್ನುವುದನ್ನ ಸ್ಪಷ್ಟಪಡಿಸಲಿ: ಸಿಎಂ ಬೊಮ್ಮಾಯಿ
ರಾಹುಲ್ ಗಾಂಧಿ,ಸೋನಿಯಾ ಗಾಂಧಿ,ಮಲ್ಲಿಕಾರ್ಜುನ ಖರ್ಗೆ ಯವರು, ದೇಶದಲ್ಲಿ ಅಶಾಂತಿ ಉಂಟುಮಾಡುವ ಭಯೋತ್ಪಾದಕರ ಪರವೋ ಅಥವಾ ದೇಶವನ್ನು ಉಳಿಸುವ ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಬೇಕೆಂದು ಸಿಎಂ ಬೊಮ್ಮಾಯಿ ಒತ್ತಾಯಿಸಿದ್ದಾರೆ.
ಬಿಜೆಪಿ ಇಂತಹ ಘಟನೆಗಳನ್ನು ಬಳಸಿಕೊಂಡು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯುತ್ತಾರೆ. ಅದೇ ರೀತಿ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳವು ವಿಚಾರವನ್ನು ಮುಚ್ಚಿಕೊಳ್ಳಲು ಈ ಪ್ರಕರಣ ಬಳಸಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದರು.
ಕಾಂಗ್ರೆಸ್ ದೇಶಭಕ್ತರ ಪರವೋ, ಭಯೋತ್ಪಾದಕರ ಪರವೋ, ಎನ್ನುವುದನ್ನ ಸ್ಪಷ್ಟಪಡಿಸಲಿ: ಸಿಎಂ ಬೊಮ್ಮಾಯಿ
ಬೆಂಗಳೂರಿನಲ್ಲಿ ನಡೆದ ವಿಜಯ ದಿವಸ್ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಎಂ, ಪ್ರತಿ ಬಾರಿ ದೇಶದ ನೈತಿಕತೆ, ಪೊಲೀಸ್ ಇಲಾಖೆಯ ನೈತಿಕತೆ ಕಡಿಮೆ ಮಾಡುವಂತೆ ಮಾತನಾಡುವುದು ದೇಶಭಕ್ತರ ಕೆಲಸವಲ್ಲ. ಇದನ್ನು ಸ್ಪಷ್ಟವಾಗಿ ಹೇಳಿದರೆ ಜನ ತೀರ್ಮಾನ ಮಾಡುತ್ತಾರೆ. ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಾಗ ಅದರ ಪ್ರಕ್ರಿಯೆ ಹಾಗೂ ತನಿಖೆಯನ್ನೇ ಪ್ರಶ್ನೆ ಮಾಡುವುದು ಭಯೋತ್ಪಾದಕ ಸಂಘಟನೆಗಳಿಗೆ ನೈತಿಕ ಬಲ ತಂದುಕೊಡುತ್ತದೆ ಎಂದರು.
ಮಂಗಳೂರಿನಲ್ಲಿ ಸ್ಪೋಟ ಗೊಳಿಸುವ ಉದ್ದೇಶ ಇತ್ತು
ಒಬ್ಬ ವ್ಯಕ್ತಿ ಬಾಂಬ್ ಗೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಕುಕ್ಕರ್ ನಲ್ಲಿ ಹಾಕಿಕೊಂಡು ಹೋಗುವಾಗ ಸ್ಪೋಟವಾಗಿದೆ. ಕುಕ್ಕರ್ ಬಾಂಬ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ,ಅದನ್ನು ಮಂಗಳೂರಿನಲ್ಲಿ ಸ್ಪೋಟ ಗೊಳಿಸುವ ಉದ್ದೇಶ ವಿತ್ತು ಎನ್ನುವುದು ಸ್ಪಷ್ಟವಾಗಿದೆ. ಆತ ತನ್ನ ಗುರುತನ್ನು ಮರೆಮಾಚಿ ಈಗಾಗಲೇ 2-3 ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಂಡಿದ್ದು, ಭಯೋತ್ಪಾದಕ ಎಂದ ಮೇಲೆ ದೇಶದ ಹೊರಗೂ ಸಂಪರ್ಕವಿತ್ತು ಎನ್ನುವುದು ಕೂಡ ಸ್ಪಷ್ಟ ಎಂದು ಸಿಎ ಬೊಮ್ಮಾಯಿ ಹೇಳಿದ್ದಾರೆ.